Eerulli rice recipe in Kannada | ಈರುಳ್ಳಿ ರೈಸ್ ಮಾಡುವ ವಿಧಾನ
ಈರುಳ್ಳಿ ರೈಸ್ ವಿಡಿಯೋ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)
- 1/2 ಕಪ್ ಅಕ್ಕಿ (ಸೋನಾ ಮಸೂರಿ)
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 7 - 8 ಕರಿಬೇವಿನ ಎಲೆ
- 1 ದೊಡ್ಡ ಈರುಳ್ಳಿ
- 1/4 ಟೀಸ್ಪೂನ್ ಅರಿಶಿನ ಪುಡಿ
- 1 ಟೇಬಲ್ ಸ್ಪೂನ್ ರಸಂ ಪೌಡರ್
- 2 ಟೇಬಲ್ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಿಸೆಹಣ್ಣು (ಅಥವಾ ರುಚಿಗೆ ತಕ್ಕಷ್ಟು)
- ಸಣ್ಣ ನೆಲ್ಲಿಕಾಯಿ ಗಾತ್ರದ ಬೆಲ್ಲ (ಅಥವಾ ರುಚಿಗೆ ತಕ್ಕಷ್ಟು)
- 1 ಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 2 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
ಈರುಳ್ಳಿ ರೈಸ್ ಮಾಡುವ ವಿಧಾನ:
- ಅಕ್ಕಿ ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ಅನ್ನ ಸ್ವಲ್ಪ ಉದುರುದುರಾಗಿರಲಿ.
- ಈರುಳ್ಳಿಯನ್ನು ತೆಳುವಾಗಿ ಕತ್ತರಿಸಿಟ್ಟುಕೊಳ್ಳಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿಮಾಡಿ. ಮೊದಲಿಗೆ ಸಾಸಿವೆ ಮತ್ತು ಜೀರಿಗೆ ಸೇರಿಸಿ.
- ಸಾಸಿವೆ ಸಿಡಿದ ಕೂಡಲೇ ಹೆಚ್ಚಿದ ಈರುಳ್ಳಿ ಮತ್ತು ಕರಿಬೇವು ಸೇರಿಸಿ ಹುರಿಯಿರಿ.
- ಅರಿಶಿನ, ಉಪ್ಪು ಮತ್ತು ಸಾರಿನ ಪುಡಿ ಸೇರಿಸಿ ಹುರಿಯಿರಿ.
- ನಂತರ ಹುಣಿಸೆರಸ ಸೇರಿಸಿ.
- ರುಚಿಗೆ ತಕ್ಕಂತೆ ಬೆಲ್ಲ ಸೇರಿಸಿ.
- ಚೆನ್ನಾಗಿ ಮಗುಚಿ ಒಂದು ನಿಮಿಷ ಕುದಿಸಿ.
- ಬೇಯಿಸಿದ ಅನ್ನ ಸೇರಿಸಿ.
- ಕೊತ್ತಂಬರಿ ಸೊಪ್ಪು ಸೇರಿಸಿ.
- ಒಂದು ಚಪ್ಪಟೆಯಾದ ಸಟ್ಟುಗದಿಂದ ಕಲಸಿ.
- ಸ್ಟವ್ ಆಫ್ ಮಾಡಿ. ಬಿಸಿ-ಬಿಸಿ ಯಾಗಿರುವಾಗಲೇ ಬಡಿಸಿ.
To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ