Heerekai maskai recipe in kannada | ಹೀರೆಕಾಯಿ ಮಸ್ಕಾಯಿ ಮಾಡುವ ವಿಧಾನ
ಮಸ್ಕಾಯಿ ವಿಡಿಯೋ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 120 ಎಂ ಎಲ್)
- 1 ಹೀರೆಕಾಯಿ
- 1/2 ಕಪ್ ತೊಗರಿ ಬೇಳೆ
- 1 ಈರುಳ್ಳಿ
- 1 ಟೊಮೇಟೊ
- 4 - 5 ಎಸಳು ಬೆಳ್ಳುಳ್ಳಿ
- 2 ಟೇಬಲ್ ಸ್ಪೂನ್ ತೆಂಗಿನತುರಿ
- 1/4 ಟೀಸ್ಪೂನ್ ಅರಶಿನ ಪುಡಿ
- 2 - 4 ಹಸಿರು ಮೆಣಸಿನಕಾಯಿ
- 1 ಟೀಸ್ಪೂನ್ ಜೀರಿಗೆ
- ಸ್ವಲ್ಪ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 4 -5 ಎಸಳು ಕತ್ತರಿಸಿದ ಬೆಳ್ಳುಳ್ಳಿ
- 1 ಈರುಳ್ಳಿ
- 4 - 5 ಕರಿಬೇವಿನ ಎಲೆ
- 2 ಟೀಸ್ಪೂನ್ ಅಡುಗೆ ಎಣ್ಣೆ
ಹೀರೆಕಾಯಿ ಮಸ್ಕಾಯಿ ಮಾಡುವ ವಿಧಾನ:
- ತೊಗರಿಬೇಳೆಯನ್ನು ತೊಳೆದು 30 ನಿಮಿಷ ನೆನೆಸಿ ಕುಕ್ಕರ್ ನಲ್ಲಿ ತೆಗೆದುಕೊಳ್ಳಿ.
- ಅದಕ್ಕೆ ಕತ್ತರಿಸಿದ ಹೀರೆಕಾಯಿ, ಈರುಳ್ಳಿ, ಟೊಮೇಟೊ, ಹಸಿಮೆಣಸಿನಕಾಯಿ ಮತ್ತು ಬೆಳ್ಳುಳ್ಳಿ ಸೇರಿಸಿ
- ತೆಂಗಿನತುರಿ, ಕೊತ್ತಂಬರಿ ಸೊಪ್ಪು ಮತ್ತು ಜೀರಿಗೆಯನ್ನು ಸೇರಿಸಿ.
- ಜೊತೆಗೆ ಅರಿಶಿನ ಮತ್ತು ಉಪ್ಪನ್ನು ಸೇರಿಸಿ.
- ಸುಮಾರು ಒಂದು ಕಪ್ ನೀರು ಸೇರಿಸಿ, ಮುಚ್ಚಳವನ್ನು ಮುಚ್ಚಿ ಎರಡು ವಿಷಲ್ ಮಾಡಿ ಮೆತ್ತಗೆ ಬೇಯಿಸಿಕೊಳ್ಳಿ.
- ಬೆಂದ ಪದಾರ್ಥಗಳನ್ನು ಕಡಗೋಲು ಉಪಯೋಗಿಸಿ ಚೆನ್ನಾಗಿ ಮಸೆಯಿರಿ. ಇಲ್ಲವೇ ಮಿಕ್ಸಿಗೆ ಹಾಕಿ ಒಂದೆರಡು ಸುತ್ತು ಅರೆಯಿರಿ. ತುಂಬ ನುಣ್ಣಗೆ ಮಾಡುವುದು ಬೇಡ.
- ಈಗ ಒಂದು ಸಣ್ಣ ಬಾಣಲೆ ತೆಗೆದುಕೊಂಡು ಎಣ್ಣೆ, ಮೆಣಸಿನಕಾಯಿ ಮತ್ತು ಸಾಸಿವೆ ಹಾಕಿ ಒಗ್ಗರಣೆ ಮಾಡಿ.
- ಕತ್ತರಿಸಿದ ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವು ಹಾಕಿ ಹುರಿಯಿರಿ.
- ಮಸೆದ ತರಕಾರಿ ಮತ್ತು ಬೇಳೆಯನ್ನು ಸೇರಿಸಿ.
- ಅಗತ್ಯವಿದ್ದಷ್ಟು ನೀರು ಮತ್ತು ರುಚಿಗೆ ತಕ್ಕಂತೆ ಉಪ್ಪು ಸೇರಿಸಿ.
- ಒಂದು ಕುದಿ ಕುದಿಸಿ, ಸ್ಟವ್ ಆರಿಸಿ. ಬಿಸಿ ಅನ್ನ ಅಥವಾ ರಾಗಿ ಮುದ್ದೆಯೊಂದಿಗೆ ಬಡಿಸಿ.