ಇಂದು ನಾನು ಹಂತ ಹಂತವಾದ ಚಿತ್ರ ವಿವರಣೆಯೊಂದಿಗೆ ಒಂದು ರುಚಿಕರ, ಆರೋಗ್ಯಕರ ಮತ್ತು ಸುಲಭ ಬೆಳ್ಳುಳ್ಳಿ ಚಟ್ನಿ ಮಾಡುವ ವಿಧಾನವನ್ನು ವಿವರಿಸಲಿದ್ದೇನೆ. ಈ ಚಟ್ನಿ ಹುರಿದ ಬೆಳ್ಳುಳ್ಳಿ, ಹುರಿದ ಕೆಂಪು ಮೆಣಸಿನಕಾಯಿ ಮತ್ತು ತೆಂಗಿನ ತುರಿಯನ್ನು ಉಪಯೋಗಿಸಿ ಮಾಡಲಾಗುತ್ತದೆ. ಈ ಚಟ್ನಿ ದೋಸೆಯೊಂದಿಗೆ ತಿನ್ನಲು ಬಹಳ ರುಚಿಕರ. ಆದರೆ ನೀವು ಇಡ್ಲಿ ಅಥವಾ ಅನ್ನದೊಂದಿಗೆ ಸಹ ತಿನ್ನಬಹುದು. ನಿಮಗೆಲ್ಲ ತಿಳಿದಿರುವ ಹಾಗೆ ಬೆಳ್ಳುಳ್ಳಿಯಲ್ಲಿ ಅನೇಕ ಔಷಧೀಯ ಗುಣಗಳಿವೆ ಮತ್ತು ಈ ಚಟ್ನಿ ಬಹಳ ಸುಲಭವಾಗಿ ಜಾಸ್ತಿ ಬೆಳ್ಳುಳ್ಳಿಯನ್ನು ಸೇವಿಸಲು ಸಹಕಾರಿಯಾಗಿದೆ.
ಬೆಳ್ಳುಳ್ಳಿ ಚಟ್ನಿ ವಿಡಿಯೋ
ತಯಾರಿ ಸಮಯ: 5 ನಿಮಿಷ
ಅಡುಗೆ ಸಮಯ : 10 ನಿಮಿಷ
ಪ್ರಮಾಣ : 3 ಜನರಿಗೆ
ಅಡುಗೆ ಸಮಯ : 10 ನಿಮಿಷ
ಪ್ರಮಾಣ : 3 ಜನರಿಗೆ
ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಮಧ್ಯಮ ಗಾತ್ರದ ಬೆಳ್ಳುಳ್ಳಿ
- 2-4 ಒಣ ಮೆಣಸಿನಕಾಯಿ
- 1 ಕಪ್ ತೆಂಗಿನ ತುರಿ
- 1 ಸಣ್ಣ ಗೋಲಿ ಗಾತ್ರದ ಹುಣಿಸೆಹಣ್ಣು
- 1 ಟೀಸ್ಪೂನ್ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/4 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ಬೆಳ್ಳುಳ್ಳಿ ಚಟ್ನಿ ಮಾಡುವ ವಿಧಾನ:
- ಬೆಳ್ಳುಳ್ಳಿಯ ಸಿಪ್ಪೆ ತೆಗೆದು ಸಣ್ಣ ತುಂಡುಗಳನ್ನಾಗಿ ಮಾಡಿಕೊಳ್ಳಿ. ಒಂದು ಬಾಣಲೆಯಲ್ಲಿ 1 ಚಮಚ ಎಣ್ಣೆ ಹಾಕಿ ಮೊದಲು ಒಣ ಮೆಣಸಿನಕಾಯಿಯನ್ನು ಹುರಿದು ತೆಗೆದಿಟ್ಟು ಕೊಳ್ಳಿ. ನಂತರ ಅದೇ ಬಾಣಲೆಯಲ್ಲಿ ತುಂಡು ಮಾಡಿದ ಬೆಳ್ಳುಳ್ಳಿಯನ್ನು ಹುರಿಯಿರಿ.
- ಒಂದು ಮಿಕ್ಸಿ ಜಾರ್ನಲ್ಲಿ ಹುರಿದ ಮೆಣಸಿನಕಾಯಿ, ಬೆಳ್ಳುಳ್ಳಿ, ತೆಂಗಿನತುರಿ, ಉಪ್ಪು ಮತ್ತು ಹುಣಿಸೆಹಣ್ಣು ಹಾಕಿ ಅರೆಯಿರಿ. ಸಾಸಿವೆ ಮತ್ತು ಒಣಮೆಣಸಿನ ಒಗ್ಗರಣೆ ಕೊಡಿ. ದೋಸೆ, ಇಡ್ಲಿ ಅಥವಾ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ