ತುಂಬಾ ಸರಳವಾದ, ದೊಡ್ಡಪತ್ರೆ ಎಲೆಗಳಿಂದ ತಯಾರಿಸಿದ ಬಜ್ಜಿ ಅಥವಾ ಬೋಂಡಾ ಇಲ್ಲಿ ವಿವರಿಸಲಾಗಿದೆ. ಬಹಳ ಕಡಿಮೆ ಸಮಯದಲ್ಲಿ ರುಚಿಕರ ಬಜ್ಜಿಗಳನ್ನು ತಯಾರಿಸಬಹುದು. ಒಮ್ಮೆ ಪ್ರಯತ್ನಿಸಿ ನೋಡಿ!!
ದೊಡ್ಡಪತ್ರೆ ದೇಶ ವಿದೇಶಗಳಲ್ಲಿ ಚಿರಪರಿಚಿತವಾಗಿರುವ ಮತ್ತು ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯವಾಗಿದ್ದು, ಇದನ್ನು ಬೇರೆ ಬೇರೆ ಹೆಸರುಗಳಿಂದ ಕರೆಯಲಾಗುತ್ತದೆ. ಈ ಸಸ್ಯದ ಬಗ್ಗೆ ಹೆಚ್ಚಿನ ಮಾಹಿತಿ, ವಿವಿಧ ಹೆಸರುಗಳು, ಔಷಧೀಯ ಗುಣಗಳು ಮತ್ತು ಇನ್ನಿತರ ಅಡುಗೆಗಳನ್ನು ಓದಲು ನಮ್ಮ "ದೊಡ್ಡಪತ್ರೆಯ ಹಲವಾರು ಅಡುಗೆಗಳು" ಪೋಸ್ಟನ್ನು ವೀಕ್ಷಿಸಿ.
ತಯಾರಿ ಸಮಯ: 5 ನಿಮಿಷ
ಅಡುಗೆ ಸಮಯ : 10 ನಿಮಿಷ
ಪ್ರಮಾಣ: 2 ಜನರಿಗೆ
ಅಡುಗೆ ಸಮಯ : 10 ನಿಮಿಷ
ಪ್ರಮಾಣ: 2 ಜನರಿಗೆ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 120 ಎಂಎಲ್ )
- 1.5 ಕಪ್ ಕಡ್ಲೆಹಿಟ್ಟು
- 15 ದೊಡ್ಡಪತ್ರೆ ಎಲೆಗಳು
- 1/2 - 1 ಟೀಸ್ಪೂನ್ ಅಚ್ಚ ಖಾರದ ಪುಡಿ
- 2 ಟೀಸ್ಪೂನ್ ಅಕ್ಕಿ ಪುಡಿ
- ಒಂದು ಸಣ್ಣ ಚಿಟಿಕೆ ಅಡುಗೆ ಸೋಡಾ
- ಒಂದು ದೊಡ್ಡ ಚಿಟಿಕೆ ಇಂಗು
- ಎಣ್ಣೆ ಬಜ್ಜಿ ಕಾಯಿಸಲು
- ಉಪ್ಪು ರುಚಿಗೆ ತಕ್ಕಷ್ಟು.
ದೊಡ್ಡಪತ್ರೆ ಬಜ್ಜಿ ಪಾಕವಿಧಾನ:
- ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟು, ಅಕ್ಕಿ ಹಿಟ್ಟು, ಅಚ್ಚಖಾರದ ಪುಡಿ, ಇಂಗು, ಸೋಡಾ ಮತ್ತು ಉಪ್ಪನ್ನು ಹಾಕಿ. ಸ್ವಲ್ಪ ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ.
- ದೊಡ್ಡಪತ್ರೆ ಎಲೆಗಳನ್ನು ತೊಳೆದಿಟ್ಟು ಕೊಳ್ಳಿ. ಸಿದ್ಧ ಪಡಿಸಿದ ಹಿಟ್ಟಿನಲ್ಲಿ ಅದ್ದಿ ಎಣ್ಣೆಯಲ್ಲಿ ಕಾಯಿಸಿ. ಬಿಸಿ ಬಿಸಿ ದೊಡ್ಡಪತ್ರೆ ಬಜ್ಜಿ ಸವಿಯಲು ಸಿದ್ಧ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ