ಮೂಲಂಗಿಯಲ್ಲಿ ಸಿ ವಿಟಮಿನ್ ಹೇರಳವಾಗಿದ್ದು, ಅನೇಕ ಖಾಯಿಲೆಗಳಿಗೆ ರಾಮಬಾಣವಾಗಿದೆ. ಮೂಲಂಗಿಯ ನಿಯಮಿತ ಸೇವನೆಯು ಮಲಬದ್ದತೆ, ಅರಶಿನ ಕಾಮಾಲೆ, ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಹೀಗೆ ಅನೇಕ ಖಾಯಿಲೆಗಳನ್ನು ದೂರವಿಡಲು ಸಹಕಾರಿಯಾಗಿದೆ. ಬೇರೆ ಚಟ್ನಿಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ.
ತಯಾರಿ ಸಮಯ: 10 ನಿಮಿಷ
ಅಡುಗೆ ಸಮಯ : 5 ನಿಮಿಷ
ಪ್ರಮಾಣ : 2 ಜನರಿಗೆ
ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಮಧ್ಯಮ ಗಾತ್ರದ ಮೂಲಂಗಿ
- 1-2 ಒಣ ಮೆಣಸಿನಕಾಯಿ
- 1/4 ಟೀಸ್ಪೂನ್ ಕೊತ್ತಂಬರಿ ಬೀಜ
- 1/4 ಕಪ್ ತೆಂಗಿನ ತುರಿ
- ಹುಣಸೆ ಹಣ್ಣು ಒಂದು ಸಣ್ಣ ತುಂಡು
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಒಣ ಮೆಣಸಿನಕಾಯಿ
- 1/4 ಟೀಸ್ಪೂನ್ ಸಾಸಿವೆ
- 4 - 5 ಕರಿಬೇವಿನ ಎಲೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ಮೂಲಂಗಿ ಚಟ್ನಿ ಪಾಕವಿಧಾನ:
- ಮೂಲಂಗಿಯನ್ನು ತೊಳೆದು ತುರಿದಿಟ್ಟುಕೊಳ್ಳಿ.
- ಒಂದು ಮಿಕ್ಸಿ ಜಾರ್ ತೆಗೆದುಕೊಂಡು, ತೆಂಗಿನ ಕಾಯಿ, ಒಣ ಮೆಣಸು, ಕೊತ್ತಂಬರಿ ಬೀಜ, ಉಪ್ಪು ಮತ್ತು ಹುಣಿಸೆಹಣ್ಣು ಹಾಕಿ, ಸ್ವಲ್ಪ ನೀರಿನಲ್ಲಿ ರುಬ್ಬಿ ಕೊಳ್ಳಿ.
- ಈಗ ಅದೇ ಮಿಕ್ಸಿ ಜಾರಿಗೆ ತುರಿದ ಮೂಲಂಗಿ ಹಾಕಿ 5 ಸೆಕೆಂಡ್ ಗಳ ಕಾಲ ರುಬ್ಬಿರಿ.
- ರುಬ್ಬಿದ ಚಟ್ನಿಯನ್ನು ಒಂದು ಬಟ್ಟಲಿಗೆ ಹಾಕಿ. ಎಣ್ಣೆ, ಸಾಸಿವೆ, ಮೆಣಸಿನಕಾಯಿ ಮತ್ತು ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ