ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್)
- 1 ಸಣ್ಣ ಗಾತ್ರದ ಅನಾನಸ್
- 1 ದೊಡ್ಡ ನಿಂಬೆ ಗಾತ್ರದ ಬೆಲ್ಲ
- 4 ಟೀಸ್ಪೂನ್ ಅಡುಗೆ ಎಣ್ಣೆ
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 1/4 ಟೀಸ್ಪೂನ್ ಅರಶಿನ ಪುಡಿ
- 4-5 ಕರಿ ಬೇವಿನ ಎಲೆ
- 1-2 ಹಸಿ ಮೆಣಸಿನ ಕಾಯಿ
- 1 ಟೀಸ್ಪೂನ್ ಸಾರಿನ ಹುಡಿ (1/2 ಟೀಸ್ಪೂನ್ ಅಚ್ಚ ಖಾರದ ಪುಡಿ+ 1/2 ಟೀಸ್ಪೂನ್ ಧನಿಯಾ ಪುಡಿ+ 1/4 ಟೀಸ್ಪೂನ್ ಜೀರಿಗೆ ಪುಡಿ)
- 1/4 ಕಪ್ ತೆಂಗಿನ ತುರಿ
- ಉಪ್ಪು ರುಚಿಗೆ ತಕ್ಕಷ್ಟು.
ಅನಾನಸ್ ಪಲ್ಯ ಮಾಡುವ ವಿಧಾನ:
- ಅನಾನಸನ್ನು ಸಿಪ್ಪೆ ತೆಗೆದು, ಸಣ್ಣದಾಗಿ ಕತ್ತರಿಸಿ.
- ಬಾಣಲೆ ಬಿಸಿ ಮಾಡಿ, ಎಣ್ಣೆ, 1/2 ಚಮಚ ಸಾಸಿವೆ, ಉದ್ದಿನ ಬೇಳೆ ಮತ್ತು ಕಡ್ಲೆಬೇಳೆ ಹಾಕಿ.
- ಸಾಸಿವೆ ಸಿಡಿದ ಕೂಡಲೇ ಸೀಳಿದ ಹಸಿಮೆಣಸಿನಕಾಯಿ ಮತ್ತು ಕರಿಬೇವಿನ ಸೊಪ್ಪು ಸೇರಿಸಿ.
- ಈಗ ಕತ್ತರಿಸಿದ ಅನಾನಸನ್ನು ಹಾಕಿ. 2 ನಿಮಿಷ ಹುರಿಯಿರಿ. ಅರಿಶಿನ ಪುಡಿ, ಉಪ್ಪು, ಬೆಲ್ಲ ಮತ್ತು ಸ್ವಲ್ಪ ನೀರು ಹಾಕಿ. ಕುದಿಯಲು ಶುರುವಾದ ಕೂಡಲೇ ಉರಿ ಕಡಿಮೆ ಮಾಡಿ. ಮುಚ್ಚಳವನ್ನು ಮುಚ್ಚಿ ಬೇಯಿಸಿ. ಆಗಾಗ್ಯೆ ಮಗುಚುತ್ತಾ ಇರಿ.
- ಅನಾನಸ್ ಬೆಂದ ಕೂಡಲೇ ಸಾರಿನ ಪುಡಿ ಮತ್ತು ತೆಂಗಿನತುರಿ ಸೇರಿಸಿ, ಚೆನ್ನಾಗಿ ಕಲಸಿ. ಬಿಸಿ ಬಿಸಿ ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ