ಗುರುವಾರ, ಜುಲೈ 27, 2017

Bili saaru recipe in Kannada | ಬಿಳಿ ಸಾರು ಮಾಡುವ ವಿಧಾನ

Bili saaru recipe in Kannada

Bili saaru recipe in Kannada | ಬಿಳಿ ಸಾರು ಮಾಡುವ ವಿಧಾನ 

ಬಿಳಿ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/4 ಕಪ್ ಹೆಸರುಬೇಳೆ
  2. 1.5 ಲೀ ನೀರು
  3. 2 ಚಮಚ ಲಿಂಬೆಹಣ್ಣಿನ ರಸ (ರುಚಿಗೆ ತಕ್ಕಂತೆ ಬದಲಾಯಿಸಿ)
  4. ಒಂದು ಚಿಟಿಕೆ ಅರಶಿನ ಪುಡಿ
  5. 1 ಟೇಬಲ್ ಚಮಚ ಕತ್ತರಿಸಿದ ಕೊತ್ತಂಬರಿ ಸೊಪ್ಪು
  6. ಉಪ್ಪು ರುಚಿಗೆ ತಕ್ಕಷ್ಟು

ಅರೆಯಲು ಬೇಕಾಗುವ ಪದಾರ್ಥಗಳು:

  1. 1/2 ಕಪ್ ತೆಂಗಿನತುರಿ
  2. 2 ಹಸಿರು ಮೆಣಸಿನ ಕಾಯಿ (ನಿಮ್ಮ ಖಾರಕ್ಕೆ ತಕ್ಕಂತೆ)
  3. 1/4 ಟೀಸ್ಪೂನ್ ಸಾಸಿವೆ
  4. 1/4 ಟೀಸ್ಪೂನ್ ಜೀರಿಗೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಒಣ ಮೆಣಸಿನಕಾಯಿ
  2. 1/4 ಟೀಸ್ಪೂನ್ ಸಾಸಿವೆ
  3. 1/4 ಟೀಸ್ಪೂನ್ ಜೀರಿಗೆ 
  4. ಒಂದು ದೊಡ್ಡ ಚಿಟಿಕೆ ಇಂಗು 
  5. 4 - 5 ಕರಿಬೇವಿನ ಎಲೆ
  6. 1 ಟೀಸ್ಪೂನ್ ಅಡುಗೆ ಎಣ್ಣೆ

ಬಿಳಿ ಸಾರು ಮಾಡುವ ವಿಧಾನ:

  1. ಹೆಸರುಬೇಳೆಯನ್ನು ತೊಳೆದು ಸ್ವಲ್ಪ ನೀರು, ಒಂದೆರಡು ಹನಿ ಎಣ್ಣೆ ಮತ್ತು ಅರಶಿನ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ. 
  2. ಅದಕ್ಕೆ ಕತ್ತರಿಸಿದ ಟೊಮೇಟೊ ಮತ್ತು ಉಪ್ಪು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
  3. ತೆಂಗಿನತುರಿ, ಜೀರಿಗೆ,  ಸಾಸಿವೆ ಮತ್ತು ಹಸಿರು ಮೆಣಸಿನ ಕಾಯಿಯನ್ನು ಮಿಕ್ಸಿಗೆ ಹಾಕಿ ಸಣ್ಣಗೆ ರುಬ್ಬಿಕೊಳ್ಳಿ. 
  4. ರುಬ್ಬಿದ ಮಿಶ್ರಣವನ್ನು ಬೇಯಿಸಿದ ಹೆಸರುಬೇಳೆ ಮತ್ತು ಟೊಮ್ಯಾಟೊಗೆ ಸೇರಿಸಿ. 
  5. ರುಚಿಗೆ ತಕ್ಕಷ್ಟು ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಸಿ. 
  6. ಸ್ಟವ್ ಆಫ್ ಮಾಡಿದ ಮೇಲೆ ಲಿಂಬೆ ಹಣ್ಣಿನ ರಸ ಸೇರಿಸಿ. 
  7. ಎಣ್ಣೆ, ಒಣಮೆಣಸು, ಸಾಸಿವೆ, ಜೀರಿಗೆ, ಕರಿಬೇವು ಮತ್ತು ಇಂಗಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...