Bellulli chitranna recipe in Kannada | ಬೆಳ್ಳುಳ್ಳಿ ಚಿತ್ರಾನ್ನ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)
- 1 ಕಪ್ ಅಕ್ಕಿ (ಸೋನಾ ಮಸೂರಿ)
- 1/4 ಕಪ್ ತೆಂಗಿನ ತುರಿ
- 1 ಮಧ್ಯಮ ಗಾತ್ರದ ಬೆಳ್ಳುಳ್ಳಿ
- 1 - 2 ಹಸಿರು ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 2 ಟೇಬಲ್ ಸ್ಪೂನ್ ಶೇಂಗಾ / ಕಡಲೆಕಾಯಿ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 5 - 6 ಕರಿಬೇವಿನ ಎಲೆ
- 2 ಟೀ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/4 ಟೀಸ್ಪೂನ್ ಅರಿಶಿನ ಪುಡಿ
- 2 ಟೀಸ್ಪೂನ್ ನಿಂಬೆರಸ (ಬೇಕಾದಲ್ಲಿ)
- 4 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
ಬೆಳ್ಳುಳ್ಳಿ ಚಿತ್ರಾನ್ನ ಮಾಡುವ ವಿಧಾನ:
- ಒಂದು ಕುಕ್ಕರ್ ನಲ್ಲಿ ಅಕ್ಕಿ ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ಅನ್ನ ಸ್ವಲ್ಪ ಉದುರುದುರಾಗಿರಲಿ.
- ಬೆಳ್ಳುಳ್ಳಿ ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿಕೊಳ್ಳಿ. ಬೇಕಾದಲ್ಲಿ ಜಜ್ಜಿಯೂ ಹಾಕಬಹುದು.
- ಒಂದು ದೊಡ್ಡ ಬಾಣಲೆಯಲ್ಲಿ ಎಣ್ಣೆ ಬಿಸಿಮಾಡಿ. ಮೊದಲಿಗೆ ಶೇಂಗಾ ಅಥವಾ ಕಡಲೆಕಾಯಿಯನ್ನು ಹಾಕಿ.
- ಕಡಲೆಕಾಯಿ ಸ್ವಲ್ಪ ಕಾದು ಸಿಡಿಯಲು ಪ್ರಾರಂಭಿಸಿದ ಕೂಡಲೇ ಸಾಸಿವೆ, ಕಡ್ಲೆಬೇಳೆ ಮತ್ತು ಉದ್ದಿನ ಬೇಳೆಯನ್ನು ಸೇರಿಸಿ.
- ಸಾಸಿವೆ ಸಿಡಿದ ಕೂಡಲೇ ಹಸಿರು ಮೆಣಸಿನಕಾಯಿ ಮತ್ತು ಕರಿಬೇವು ಸೇರಿಸಿ ಹುರಿಯಿರಿ.
- ನಂತರ ಸಣ್ಣಗೆ ಕತ್ತರಿಸಿದ ಬೆಳ್ಳುಳ್ಳಿ ಹಾಕಿ ಹುರಿಯಿರಿ.
- ತೆಂಗಿನ ತುರಿ ಮತ್ತು ಅರಿಶಿನ ಪುಡಿ ಹಾಕಿ ಚೆನ್ನಾಗಿ ಕಲಸಿ. ಸ್ಟೋವ್ ಆಫ್ ಮಾಡಿ.
- ನಂತರ ಬೇಯಿಸಿದ ಅನ್ನ, ಹೆಚ್ಚಿದ ಕೊತ್ತಂಬರಿ ಸೊಪ್ಪು ಮತ್ತು ಉಪ್ಪು ಸೇರಿಸಿ.
- ಬೇಕಾದಲ್ಲಿ ನಿಂಬೆರಸ ಸೇರಿಸಿ.
- ಒಂದು ಚಪ್ಪಟೆಯಾದ ಸಟ್ಟುಗದಿಂದ ಕಲಸಿ. ಬಿಸಿ-ಬಿಸಿ ಯಾಗಿರುವಾಗಲೇ ಬಡಿಸಿ.
To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)
Super I tried it with leftover rice for breakfast in a farm with friends. Every body liked it and saved lots
ಪ್ರತ್ಯುತ್ತರಅಳಿಸಿ