Menthe dose recipe in Kannada | ಮೆಂತೆ ದೋಸೆ ಮಾಡುವ ವಿಧಾನ
ಮೆಂತೆ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 2 ಕಪ್ ದೋಸೆ ಅಕ್ಕಿ
- 4 - 6 ಟೀಸ್ಪೂನ್ ಮೆಂತ್ಯ
- ಎಣ್ಣೆ ದೋಸೆ ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ಮೆಂತೆ ದೋಸೆ ಮಾಡುವ ವಿಧಾನ:
- ಅಕ್ಕಿ ಮತ್ತು ಮೆಂತೆಯನ್ನು ತೊಳೆದು 5-6 ಗಂಟೆಗಳ ಕಾಲ ನೆನೆಯಲು ಬಿಡಿ.
- ನೆನೆಸಿದ ನಂತರ ಅಕ್ಕಿ ಮತ್ತು ಮೆಂತೆಯನ್ನು ಬೇಕಾದಷ್ಟು ನೀರು ಸೇರಿಸಿ, ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ.
- ಹಿಟ್ಟನ್ನು ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ, 8-10 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ. ಗಮನಿಸಿ, ಉದ್ದಿನ ದೋಸೆಯಂತೆ ಹಿಟ್ಟು ಮೇಲೆ ಬರುವುದಿಲ್ಲ. ಹಿಟ್ಟು ಸರಿಯಾಗಿ ಹುದುಗದಿದ್ದರೆ ದೋಸೆ ಕಹಿಯಾಗುವುದು.
- ಹುದುಗಿದ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಹಿಟ್ಟು ಉದ್ದಿನ ದೋಸೆಗಿಂತ ಸ್ವಲ್ಪ ತೆಳುವಾಗಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಎಣ್ಣೆ ಹಚ್ಚಿ, ಹಿಟ್ಟು ಸುರಿದು, ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ಹರಡಿ, ಮುಚ್ಚಳವನ್ನು ಮುಚ್ಚಿ .
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ದೋಸೆ ಒಂದು ಬದಿ ಕಾಯಿಸಿದರೆ ಸಾಕು. ತೆಂಗಿನಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ. ತುಪ್ಪ ಮತ್ತು ಸಕ್ಕರೆಯೊಂದಿಗೂ ಸವಿಯಬಹುದು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ