Menthe soppu dose recipe in Kannada | ಮೆಂತೆ ಸೊಪ್ಪು ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ದೋಸೆ ಅಕ್ಕಿ
- 1/2 ಕಟ್ಟು ಅಥವಾ 1.5 ಕಪ್ ಕತ್ತರಿಸಿದ ಮೆಂತೆ ಸೊಪ್ಪು
- 1/4 ಕಪ್ ತೆಂಗಿನ ತುರಿ
- 1 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 2 ಕೆಂಪು ಮೆಣಸಿನಕಾಯಿ
- ಸಣ್ಣ ಗೋಲಿ ಗಾತ್ರದ ಹುಣಸೆ ಹಣ್ಣು
- 1 ಟೀಸ್ಪೂನ್ ಬೆಲ್ಲ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು
ಮೆಂತೆ ಸೊಪ್ಪು ದೋಸೆ ಮಾಡುವ ವಿಧಾನ:
- ಮೆಂತೆ ಸೊಪ್ಪನ್ನು ಆಯ್ದು, ತೊಳೆದು, ಸಣ್ಣಗೆ ಕತ್ತರಿಸಿ.
- ಅಕ್ಕಿಯನ್ನು ತೊಳೆದು 4 - 5 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ.
- ನಂತರ ನೀರನ್ನು ಬಗ್ಗಿಸಿ, ತೆಂಗಿನ ತುರಿ, ಕೊತ್ತಂಬರಿ ಬೀಜ, ಜೀರಿಗೆ, ಕೆಂಪು ಮೆಣಸಿನಕಾಯಿ, ಬೆಲ್ಲ ಮತ್ತು ಹುಣಸೆ ಹಣ್ಣು ಹಾಕಿ ಮಿಕ್ಸರ್ ಗ್ರೈಂಡರ್ ನಲ್ಲಿ ನಯವಾಗಿ ಅರೆಯಿರಿ.
- ಅರೆದ ಮೇಲೆ ಒಂದು ಪಾತ್ರೆಗೆ ಹಾಕಿ. ಈಗ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
- ಕತ್ತರಿಸಿದ ಮೆಂತೆ ಸೊಪ್ಪು ಸೇರಿಸಿ ಕಲಸಿ.
- ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ. ಹಿಟ್ಟು ನೀರು ದೋಸೆ ಅಥವಾ ರವೇ ದೋಸೆ ಹಿಟ್ಟಿಗಿಂತ ಸ್ವಲ್ಪ ದಪ್ಪ ಇರಲಿ.
- ದೋಸೆ ಕಲ್ಲು ಅಥವಾ ಹಂಚನ್ನು ಬಿಸಿ ಮಾಡಿ. ಒಂದು ಸೌಟು ದೋಸೆ ಹಿಟ್ಟನ್ನು ಸೌಟಿನಿಂದ ಸುರಿದು ದೋಸೆ ಮಾಡಿ.
- ಸುಮಾರು 10 ಸೆಕೆಂಡುಗಳ ಕಾಲ ಮುಚ್ಚಳವನ್ನು ಮುಚ್ಚಿ. ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ.
- ದೋಸೆಯನ್ನು ಮಗುಚಿ ಇನ್ನೊಂದು ಬದಿ ಕಾಯಿಸಿ. ಬಿಸಿ ಬಿಸಿ ದೋಸೆಯನ್ನು ಬೆಣ್ಣೆ ಮತ್ತು ಚಟ್ನಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ