Chana masala recipe in Kannada | ಚನಾ ಮಸಾಲಾ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಕಪ್ ಕಾಬುಲ್ ಕಡ್ಲೆ
- 1 ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- 2 ಟೊಮೇಟೊ ಸಣ್ಣಗೆ ಹೆಚ್ಚಿದ್ದು
- 1/2 ಟೀಸ್ಪೂನ್ ಜೀರಿಗೆ
- 1 ಪುಲಾವ್ ಅಥವಾ ದಾಲ್ಚಿನ್ನಿ ಎಲೆ
- 1 ಟೀಸ್ಪೂನ್ ಶುಂಠಿ ಬೆಳ್ಳುಳ್ಳಿ ಪೇಸ್ಟ್ (ಅಥವಾ ಸಣ್ಣಗೆ ಹೆಚ್ಚಿದ್ದು)
- 1/2 ಟೀಸ್ಪೂನ್ ಅಚ್ಚಖಾರದ ಪುಡಿ
- 1/4 ಟೀಸ್ಪೂನ್ ಗರಂ ಮಸಾಲಾ
- 1 ಟೀಸ್ಪೂನ್ ಕೊತ್ತಂಬರಿ ಅಥವಾ ಧನಿಯಾ ಪುಡಿ
- 1/4 ಟೀಸ್ಪೂನ್ ಜೀರಿಗೆ ಪುಡಿ
- 1/4 ಟೀಸ್ಪೂನ್ ಅರಿಶಿನ ಪುಡಿ
- 1/4 ಟೀಸ್ಪೂನ್ ಮಾವಿನಕಾಯಿ ಪುಡಿ
- 1 ಟೇಬಲ್ ಚಮಚ ಕಸೂರಿ ಮೇಥಿ ಅಥವಾ ಒಣಗಿದ ಮೆಂತೆ ಸೊಪ್ಪು (ಬೇಕಾದಲ್ಲಿ)
- 1 ಟೇಬಲ್ ಚಮಚ ಅಡುಗೆ ಎಣ್ಣೆ
- 1 ಟೇಬಲ್ ಚಮಚ ಬೆಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
ಚನಾ ಮಸಾಲಾ ಮಾಡುವ ವಿಧಾನ:
- ಕಾಬುಲ್ ಕಡ್ಲೆಯನ್ನು 5 - 6 ಘಂಟೆಗಳ ಕಾಲ ನೆನೆಸಿ.
- ಒಂದು ಕುಕ್ಕರ್ ನಲ್ಲಿ ಎಣ್ಣೆ ಬಿಸಿ ಮಾಡಿ. ಅದಕ್ಕೆ ಜೀರಿಗೆ ಮತ್ತು ದಾಲ್ಚಿನ್ನಿ ಎಲೆ ಹಾಕಿ.
- ಜೀರಿಗೆ ಸಿಡಿದ ಮೇಲೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಸೇರಿಸಿ ಮೆತ್ತಗಾಗುವವರೆಗೆ ಹುರಿಯಿರಿ.
- ನಂತರ ಸಣ್ಣಗೆ ಕತ್ತರಿಸಿದ ಟೊಮೇಟೊ ಸೇರಿಸಿ ಹುರಿಯಿರಿ.
- ನಂತರ ಅದಕ್ಕೆ ಅಚ್ಚಖಾರದ ಪುಡಿ, ಗರಂ ಮಸಾಲಾ, ಕೊತ್ತಂಬರಿ ಅಥವಾ ಧನಿಯಾ ಪುಡಿ, ಜೀರಿಗೆ ಪುಡಿ ಮತ್ತು ಮಾವಿನಕಾಯಿ ಪುಡಿ ಹಾಕಿ ಮಗುಚಿ.
- ಆಮೇಲೆ ಉಪ್ಪು ಮತ್ತು ಅರಿಶಿನ ಹಾಕಿ ಟೊಮೇಟೊ ಮೆತ್ತಗಾಗುವವರೆಗೆ ಹುರಿಯಿರಿ.
- ಅದಕ್ಕೆ ನೆನೆಸಿದ ಕಡ್ಲೆಯನ್ನು ಹಾಕಿ.
- 2 ಕಪ್ ನೀರು ಮತ್ತು ಕಸೂರಿ ಮೇಥಿ ಹಾಕಿ.
- ಮುಚ್ಚಳ ಮುಚ್ಚಿ ಕಡ್ಲೆ ಮೆತ್ತಗಾಗುವವರೆಗೆ ಬೇಯಿಸಿ. ನಾನು 2 - 2 - 2 ರಂತೆ ಮೂರು ಬಾರಿ ವಿಷಲ್ ಮಾಡಿದೆ.
- ಕುಕ್ಕರ್ ನ ಒತ್ತಡ ಕಡಿಮೆ ಆದಮೇಲೆ ಸಟ್ಟುಗದ ಹಿಂಭಾಗ ಉಪಯೋಗಿಸಿ ಸ್ವಲ್ಪ ಕಡ್ಲೆಯನ್ನು ಮಸೆಯಿರಿ ಅಥವಾ ಮ್ಯಾಶ್ ಮಾಡಿ .
- ಸ್ವಲ್ಪ ಹೊತ್ತು ಕುದಿಸಿ ಸ್ಟವ್ ಆಫ್ ಮಾಡಿ. ಕೊನೆಯಲ್ಲಿ ಬೆಣ್ಣೆ ಹಾಕಿ ಮಗುಚಿ. ಚಪಾತಿ ಅಥವಾ ಪೂರಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ