Gojjavalakki recipe in Kannada | ಗೊಜ್ಜವಲಕ್ಕಿ ಮಾಡುವ ವಿಧಾನ
ಗೊಜ್ಜವಲಕ್ಕಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ಗಟ್ಟಿ ಅವಲಕ್ಕಿ
- 1/4 ಕಪ್ ತೆಂಗಿನ ತುರಿ
- 1 ನೆಲ್ಲಿಕಾಯಿ ಗಾತ್ರದ ಬೆಲ್ಲ
- 1 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/4 ಟೀಸ್ಪೂನ್ ಅರಿಶಿನ
- ಉಪ್ಪು ರುಚಿಗೆ ತಕ್ಕಷ್ಟು.
ಮಸಾಲೆಗೆ ಬೇಕಾಗುವ ಪದಾರ್ಥಗಳು:
- 2 - 4 ಕೆಂಪು ಮೆಣಸಿನಕಾಯಿ
- 1.5 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 7 - 8 ಮೆಂತ್ಯೆ
- ಚಿಟಿಕೆ ಸಾಸಿವೆ
- ದೊಡ್ಡ ಚಿಟಿಕೆ ಇಂಗು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ (ಬೇಕಾದಲ್ಲಿ)
- 1/2 ಟೀಸ್ಪೂನ್ ಸಾಸಿವೆ
- 2 ಟೇಬಲ್ ಚಮಚ ಕಡಲೇಕಾಯಿ ಅಥವಾ ಶೇಂಗಾ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 7 - 8 ಗೋಡಂಬಿ (ಬೇಕಾದಲ್ಲಿ)
- 4 - 6 ಕರಿಬೇವಿನ ಎಲೆ
- 4 ಟೇಬಲ್ ಚಮಚ ಅಡುಗೆ ಎಣ್ಣೆ
ಗೊಜ್ಜವಲಕ್ಕಿ ಮಾಡುವ ವಿಧಾನ:
- ಒಂದು ಬಟ್ಟಲಿನಲ್ಲಿ ಹುಣಿಸೆಹಣ್ಣನ್ನು ಅರ್ಧ ಕಪ್ ನೀರಿನಲ್ಲಿ ನೆನೆಸಿಡಿ.
- ಒಂದು ಬಾಣಲೆಯಲ್ಲಿ ಒಣ ಮೆಣಸಿನಕಾಯಿ, ಕೊತ್ತಂಬರಿ ಬೀಜ, ಜೀರಿಗೆ, ಸಾಸಿವೆ, ಮೆಂತೆ ಮತ್ತು ಇಂಗನ್ನು ಹುರಿದು ಪುಡಿ ಮಾಡಿಟ್ಟುಕೊಳ್ಳಿ. ಬದಲಾಗಿ ರಸಂ ಪೌಡರ್ ಬಳಸಬಹುದು.
- ದಪ್ಪ ಅಥವಾ ಗಟ್ಟಿ ಅವಲಕ್ಕಿಯನ್ನು ಮಿಕ್ಸಿ ಜಾರಿನಲ್ಲಿ ದೊಡ್ಡದಾಗಿ ಪುಡಿ ಮಾಡಿ.
- ಪುಡಿ ಮಡಿದ ಅವಲಕ್ಕಿಯನ್ನು ಒಂದು ಬಟ್ಟಲಿನಲ್ಲಿ ತೆಗೆದುಕೊಳ್ಳಿ. ಮತ್ತು ಅದಕ್ಕೆ ಉಪ್ಪು, ಅರಿಶಿನ ಮತ್ತು ಸಿದ್ಧ ಪಡಿಸಿದ ಮಸಾಲೆ ಪುಡಿಯನ್ನು (ಅಥವಾ ರಸಂ ಪೌಡರ್) ಹಾಕಿ.
- ನಂತ್ರ ಬೆಲ್ಲ ಮತ್ತು ಹುಣಸೆ ರಸ ಸೇರಿಸಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ ಕಲಸಿ. ನೀರಿನ ಪ್ರಮಾಣ ಅವಲಕ್ಕಿಯ ದಪ್ಪದ ಮೇಲೆ ಬದಲಾಗುತ್ತದೆ. ನಾನು ಸುಮಾರು ಒಂದೂವರೆ ಕಪ್ ನಷ್ಟು ಹಾಕಿದೆ.
- ಒಂದು ಬಾಣಲೆಯಲ್ಲಿ ಎಣ್ಣೆ, ಕೆಂಪು ಮೆಣಸಿನಕಾಯಿ, ಸಾಸಿವೆ , ಉದ್ದಿನ ಬೇಳೆ, ಕಡಲೆಬೇಳೆ, ಗೋಡಂಬಿ ಮತ್ತು ಕಡಲೆಕಾಯಿ (ಶೇಂಗಾ) ಬಳಸಿಕೊಂಡು ಒಗ್ಗರಣೆ ಮಾಡಿ.
- ನಂತರ ಕರಿಬೇವು ಸೇರಿಸಿ.
- ಸಿದ್ದಪಡಿಸಿದ ಅವಲಕ್ಕಿ ಮಿಶ್ರಣವನ್ನು ಹಾಕಿ, ಚೆನ್ನಾಗಿ ಕಲಸಿ.
- 5 ನಿಮಿಷ ಕಡಿಮೆ ಜ್ವಾಲೆಯಲ್ಲಿ ಬೇಯಿಸಿ. ತುಂಬ ಪುಡಿ ಪುಡಿ ಅಥವಾ ಒಣ ಒಣ ಎನಿಸಿದರೆ ಸ್ವಲ್ಪ ನೀರು ಚಿಮುಕಿಸಿ.
- ಕೊನೆಯಲ್ಲಿ ತೆಂಗಿನ ತುರಿ ಮತ್ತು ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ ಕಲಸಿ. ರುಚಿಕರ ಗೊಜ್ಜವಲಕ್ಕಿಯನ್ನು ತಿಂದು ಆನಂದಿಸಿ.
ವಿವರಣೆ ತುಂಬಾ ಚೆನ್ನಾಗಿದೆ ...ಧನ್ಯವಾದಗಳು
ಪ್ರತ್ಯುತ್ತರಅಳಿಸಿ