Heerekai bonda or bajji recipe in Kannada | ಹೀರೆಕಾಯಿ ಬೋಂಡಾ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1.5 ಕಪ್ ಕಡ್ಲೆಹಿಟ್ಟು
- 1/4 ಕಪ್ ಅಕ್ಕಿಹಿಟ್ಟು
- 1 ಹೀರೆಕಾಯಿ
- 1/2 - 1 ಟೀಸ್ಪೂನ್ ಅಚ್ಚ ಖಾರದ ಪುಡಿ
- ಒಂದು ಸಣ್ಣ ಚಿಟಿಕೆ ಅಡುಗೆ ಸೋಡಾ
- ಒಂದು ದೊಡ್ಡ ಚಿಟಿಕೆ ಇಂಗು
- ಎಣ್ಣೆ ಬಜ್ಜಿ ಕಾಯಿಸಲು
- ಉಪ್ಪು ರುಚಿಗೆ ತಕ್ಕಷ್ಟು.
ಹೀರೆಕಾಯಿ ಬೋಂಡಾ ಮಾಡುವ ವಿಧಾನ:
- ಹೀರೇಕಾಯಿಯನ್ನು ತೊಳೆದು, ಸಿಪ್ಪೆ ತೆಗೆದು, ತೆಳುವಾದ ಗಾಲಿಗಳಾಗಿ ಕತ್ತರಿಸಿಕೊಳ್ಳಿ.
- ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟು, ಅಕ್ಕಿ ಹಿಟ್ಟು, ಅಚ್ಚಖಾರದ ಪುಡಿ, ಇಂಗು, ಸೋಡಾ ಮತ್ತು ಉಪ್ಪನ್ನು ತೆಗೆದುಕೊಳ್ಳಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿಮಾಡಿ.
- ಕತ್ತರಿಸಿದ ಹೀರೆಕಾಯಿಯನ್ನು ಸಿದ್ಧ ಪಡಿಸಿದ ಹಿಟ್ಟಿನಲ್ಲಿ ಅದ್ದಿ ಬಿಸಿ ಎಣ್ಣೆಯಲ್ಲಿ ಕಾಯಿಸಿ.
- ಬಿಸಿ ಬಿಸಿ ಬಜ್ಜಿ ಅಥವಾ ಬೋಂಡಾವನ್ನು ಸವಿಯಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ