Basale soppu sambar recipe in Kannada | ಬಸಳೆ ಸೊಪ್ಪು ಸಾಂಬಾರ್ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 ಕಟ್ಟು ಬಸಳೆ ಸೊಪ್ಪು
- 1/4 ಕಪ್ ಅಲಸಂದೆ ಕಾಳು ಅಥವಾ ಹುರಿದ ಹುರುಳಿಕಾಳು
- 1/4 ಟೀಸ್ಪೂನ್ ಅರಿಶಿನ ಪುಡಿ
- 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
ಮಸಾಲೆಗೆ ಬೇಕಾಗುವ ಪದಾರ್ಥಗಳು:
- 1 ಕಪ್ ತೆಂಗಿನ ತುರಿ
- 2 - 4 ಒಣ ಮೆಣಸಿನಕಾಯಿ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಸಾಸಿವೆ
- 2 ಬೇಳೆ ಬೆಳ್ಳುಳ್ಳಿ
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 5 - 6 ಕರಿಬೇವು
- 1/4 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ಬಸಳೆ ಸೊಪ್ಪು ಸಾಂಬಾರ್ ಮಾಡುವ ವಿಧಾನ:
- ಬಸಳೆ ಎಲೆ ಮತ್ತು ದಂಟನ್ನು ಬೇರೆ ಮಾಡಿ ತೊಳೆಯಿರಿ. ದಂಟನ್ನು ಬೆರಳುದ್ದ ಕತ್ತರಿಸಿ. ಸೊಪ್ಪನ್ನು ಸಣ್ಣಗೆ ಕತ್ತರಿಸಿ.
- ಒಂದು ಕುಕ್ಕರ್ ನಲ್ಲಿ ಅಲಸಂದೆ ಕಾಳನ್ನು (ಅಥವಾ ಹುರಿದ ಹುರುಳಿಕಾಳು) ತೆಗೆದುಕೊಂಡು ತೊಳೆಯಿರಿ. ಅದಕ್ಕೆ ಕತ್ತರಿಸಿದ ಬಸಳೆ ಸೊಪ್ಪಿನ ದಂಟನ್ನು ಹಾಕಿ, ಅರ್ಧ ಲೋಟ ನೀರು ಹಾಕಿ, ಒಂದು ವಿಷಲ್ ಮಾಡಿ.
- ನಂತರ ಅದಕ್ಕೆ ಕತ್ತರಿಸಿದ ಸೊಪ್ಪು, ಸ್ವಲ್ಪ ಉಪ್ಪು ಮತ್ತು ಅರಿಶಿನ ಪುಡಿ ಹಾಕಿ.
- ಅರ್ಧ ಲೋಟ ನೀರು ಹಾಕಿ ಪುನಃ ಒಂದು ವಿಷಲ್ ಮಾಡಿ ಬೇಯಿಸಿ ಕೊಳ್ಳಿ.
- ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಕೊತ್ತಂಬರಿ ಬೀಜ ಮತ್ತು ಸಾಸಿವೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
- ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ನೀರು ಸೇರಿಸಿ ಅರೆಯಿರಿ.
- ಕೊನೆಯಲ್ಲಿ ಬೆಳ್ಳುಳ್ಳಿ ಹಾಕಿ ಒಂದು ಸುತ್ತು ಅರೆದು ತೆಗೆಯಿರಿ.
- ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. ಉಪ್ಪು ಮತ್ತು ಹುಣಿಸೆರಸ ಹಾಕಿ.
- ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
- ಒಣ ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ