Cabbage dose recipe in Kannada | ಎಲೆಕೋಸು ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ದೋಸೆ ಅಕ್ಕಿ
- 1 ಕಪ್ ಸಣ್ಣಗೆ ಕತ್ತರಿಸಿದ ಎಲೆಕೋಸು
- 1 ಮಧ್ಯಮ ಗಾತ್ರದ ಈರುಳ್ಳಿ
- 1/4 ಕಪ್ ತೆಂಗಿನ ತುರಿ
- 1 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 2 ಕೆಂಪು ಮೆಣಸಿನಕಾಯಿ
- ಸಣ್ಣ ಗೋಲಿ ಗಾತ್ರದ ಹುಣಸೆ ಹಣ್ಣು
- 1 ಟೀಸ್ಪೂನ್ ಬೆಲ್ಲ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು
ಎಲೆಕೋಸು ದೋಸೆ ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು 4 - 5 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ.
- ನಂತರ ನೀರನ್ನು ಬಗ್ಗಿಸಿ, ತೆಂಗಿನ ತುರಿ, ಕೊತ್ತಂಬರಿ, ಜೀರಿಗೆ, ಕೆಂಪು ಮೆಣಸಿನಕಾಯಿ, ಬೆಲ್ಲ ಮತ್ತು ಹುಣಸೆ ಹಣ್ಣು ಹಾಕಿ ಮಿಕ್ಸರ್ ಗ್ರೈಂಡರ್ ನಲ್ಲಿ ನಯವಾಗಿ ಅರೆಯಿರಿ.
- ಅರೆದ ಮೇಲೆ ಒಂದು ಪಾತ್ರೆಗೆ ಹಾಕಿ. ಈಗ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ. ಹಿಟ್ಟು ತೆಳುವಾದ ಮಿಲ್ಕ್ ಶೇಕ್ ನಂತಿರಲಿ.
- ಅದಕ್ಕೆ ಸಣ್ಣಗೆ ಹೆಚ್ಚಿದ ಎಲೆಕೋಸು ಮತ್ತು ಈರುಳ್ಳಿಯನ್ನು ಸೇರಿಸಿ.
- ದೋಸೆ ಕಲ್ಲು ಅಥವಾ ಹಂಚನ್ನು ಬಿಸಿ ಮಾಡಿ. ಒಂದು ಸೌಟು ದೋಸೆ ಹಿಟ್ಟನ್ನು ಸೌಟಿನಿಂದ ಸುರಿದು ದೋಸೆ ಮಾಡಿ.
- ಸುಮಾರು 10 ಸೆಕೆಂಡುಗಳ ಕಾಲ ಮುಚ್ಚಳವನ್ನು ಮುಚ್ಚಿ. ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ.
- ದೋಸೆಯನ್ನು ಮಗುಚಿ ಇನ್ನೊಂದು ಬದಿ ಕಾಯಿಸಿ.
- ಬಿಸಿ ಬಿಸಿ ದೋಸೆಯನ್ನು ತುಪ್ಪ ಮತ್ತು ಚಟ್ನಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ