Hesarubele thove recipe in Kannada | ಹೆಸರುಬೇಳೆ ತೊವೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/4 ಕಪ್ ಹೆಸರುಬೇಳೆ
- 1 ಲೀ ನೀರು
- 1 ಸಣ್ಣ ಟೊಮೇಟೊ
- 1 - 2 ಹಸಿರು ಮೆಣಸಿನ ಕಾಯಿ (ನಿಮ್ಮ ಖಾರಕ್ಕೆ ತಕ್ಕಂತೆ)
- 1 cm ಉದ್ದದ ಶುಂಠಿ
- ಒಂದು ಚಿಟಿಕೆ ಅರಶಿನ ಪುಡಿ
- 1 ಟೇಬಲ್ ಚಮಚ ಕತ್ತರಿಸಿದ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು
ಅರೆಯಲು ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನತುರಿ
- 1/4 ಟೀಸ್ಪೂನ್ ಸಾಸಿವೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/4 ಟೀಸ್ಪೂನ್ ಸಾಸಿವೆ
- ಒಂದು ದೊಡ್ಡ ಚಿಟಿಕೆ ಇಂಗು
- 4 - 5 ಕರಿಬೇವಿನ ಎಲೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ಹೆಸರುಬೇಳೆ ತೊವೆ ಮಾಡುವ ವಿಧಾನ:
- ಹೆಸರುಬೇಳೆಯನ್ನು ತೊಳೆದು ಸ್ವಲ್ಪ ನೀರು, ಒಂದೆರಡು ಹನಿ ಎಣ್ಣೆ ಮತ್ತು ಅರಶಿನ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
- ಅದಕ್ಕೆ ಕತ್ತರಿಸಿದ ಟೊಮೇಟೊ, ಹಸಿರುಮೆಣಸಿನಕಾಯಿ ಮತ್ತು ಶುಂಠಿ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
- ತೆಂಗಿನತುರಿ ಮತ್ತು ಸಾಸಿವೆಯನ್ನು ಮಿಕ್ಸಿಗೆ ಹಾಕಿ ಸಣ್ಣಗೆ ರುಬ್ಬಿಕೊಳ್ಳಿ.
- ರುಬ್ಬಿದ ಮಿಶ್ರಣವನ್ನು ಬೇಯಿಸಿದ ಹೆಸರುಬೇಳೆ ಮತ್ತು ಟೊಮ್ಯಾಟೊಗೆ ಸೇರಿಸಿ.
- ರುಚಿಗೆ ತಕ್ಕಷ್ಟು ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಸಿ.
- ಎಣ್ಣೆ, ಒಣಮೆಣಸು, ಸಾಸಿವೆ, ಕರಿಬೇವು ಮತ್ತು ಇಂಗಿನ ಒಗ್ಗರಣೆ ಕೊಡಿ. ಬಿಸಿ ಇಡ್ಲಿ ಅಥವಾ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ