Basale soppu thambli in kannada | ಬಸಳೆ ಸೊಪ್ಪು ತಂಬುಳಿ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 ದೊಡ್ಡ ಹಿಡಿ ಬಸಳೆಸೊಪ್ಪು
- 1/2 ಟೀಸ್ಪೂನ್ ಜೀರಿಗೆ
- 1/2 ಟೀಸ್ಪೂನ್ ಕಾಳುಮೆಣಸು
- 1/4 ಕಪ್ ತೆಂಗಿನತುರಿ
- 1/2 ಕಪ್ ಮೊಸರು
- 1 ಒಣ ಮೆಣಸಿನಕಾಯಿ
- 2 ಟೀಸ್ಪೂನ್ ತುಪ್ಪ ಅಥವಾ ಅಡುಗೆ ಎಣ್ಣೆ
- 1/4 ಟೀಸ್ಪೂನ್ ಸಾಸಿವೆ
- ಉಪ್ಪು ರುಚಿಗೆ ತಕ್ಕಷ್ಟು.
ಬಸಳೆ ಸೊಪ್ಪು ತಂಬುಳಿ ಮಾಡುವ ವಿಧಾನ:
- ಬಸಳೆ ಸೊಪ್ಪನ್ನು ಆಯ್ದು, ತೊಳೆದು ಕತ್ತರಿಸಿ.
- ಒಂದು ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಅಥವಾ ತುಪ್ಪ ಹಾಕಿ ಜೀರಿಗೆ ಮತ್ತು ಕಾಳುಮೆಣಸನ್ನು ಹುರಿಯಿರಿ.
- ಜೀರಿಗೆ ಸಿಡಿದ ಕೂಡಲೇ ಕತ್ತರಿಸಿದ ಬಸಳೆ ಸೊಪ್ಪನ್ನು ಹಾಕಿ.
- ಬಾಡಿದ ಕೂಡಲೇ ಸ್ಟೋವ್ ಆಫ್ ಮಾಡಿ.
- ಹುರಿದ ಪದಾರ್ಥಗಳು ಮತ್ತು ತೆಂಗಿನ ತುರಿಯನ್ನು ಮಿಕ್ಸಿ ಜಾರಿಗೆ ಹಾಕಿ.
- ಅಗತ್ಯವಿದ್ಧಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ.
- ಅರೆದ ಮಿಶ್ರಣವನ್ನು ಒಂದು ಪಾತ್ರೆಗೆ ಹಾಕಿ. ಉಪ್ಪು, ಮೊಸರು ಮತ್ತು ಬೇಕಾದಷ್ಟು ನೀರು ಹಾಕಿ.
- ಎಣ್ಣೆ, ಒಣಮೆಣಸು ಮತ್ತು ಸಾಸಿವೆ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ