Instant uppittu mix recipe in Kannada | ದಿಢೀರ್ ಉಪ್ಪಿಟ್ಟು ಮಿಕ್ಸ್ ಮಾಡುವ ವಿಧಾನ
ಮಿಕ್ಸ್ ತಯಾರಿಸಲು ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1/2 ಕಪ್ ರವೆ
- 1/4 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಉದ್ದಿನಬೇಳೆ
- 1/2 ಟೀಸ್ಪೂನ್ ಕಡ್ಲೆಬೇಳೆ (ಬೇಕಾದಲ್ಲಿ)
- ದೊಡ್ಡ ಚಿಟಿಕೆ ಇಂಗು
- 1-2 ಹಸಿರು ಮೆಣಸಿನಕಾಯಿ
- 5-6 ಕರಿ ಬೇವಿನ ಎಲೆ
- 1 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
- ದೊಡ್ಡ ಚಿಟಿಕೆ ಅರಶಿನ ಪುಡಿ
- 2 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
- 1/2 ಟೀಸ್ಪೂನ್ ಸಕ್ಕರೆ (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- 1/2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
ಉಪ್ಪಿಟ್ಟು ಮಾಡಲು ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1.25 ಕಪ್ ನೀರು
- 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 2 ಟೇಬಲ್ ಸ್ಪೂನ್ ತೆಂಗಿನತುರಿ
ದಿಢೀರ್ ಉಪ್ಪಿಟ್ಟು ಮಿಕ್ಸ್ ಮಾಡುವ ವಿಧಾನ:
- ಮೊದಲಿಗೆ ರವೆಯನ್ನು ಹುರಿದಿಟ್ಟುಕೊಳ್ಳಿ.
- ಆಮೇಲೆ ಒಂದು ಬಾಣಲೆ ಬಿಸಿಮಾಡಿ, ಎಣ್ಣೆ, ಸಾಸಿವೆ, ಉದ್ದಿನಬೇಳೆ ಮತ್ತು ಕಡ್ಲೆಬೇಳೆ ಹಾಕಿ ಒಗ್ಗರಣೆ ತಯಾರಿಸಿ
- ಸಾಸಿವೆ ಸಿಡಿದ ಕೂಡಲೇ ಗೋಡಂಬಿ, ಇಂಗು ಮತ್ತು ಅರಿಶಿನ ಪುಡಿ ಸೇರಿಸಿ.
- ನಂತರ ಕರಿಬೇವು, ಕತ್ತರಿಸಿದ ಶುಂಠಿ ಮತ್ತು ಹಸಿರು ಮೆಣಸಿನಕಾಯಿ ಸೇರಿಸಿ ಕೈಯಾಡಿಸಿ.
- ಹುರಿದಿಟ್ಟ ರವೆ ಸೇರಿಸಿ ಮಧ್ಯಮ ಉರಿಯಲ್ಲಿ ಒಂದೆರಡು ನಿಮಿಷಗಳ ಕಾಲ ಹುರಿಯಿರಿ.
- ಉಪ್ಪು ,ಮತ್ತು ಸಕ್ಕರೆ ಸೇರಿಸಿ ಮಗುಚಿ. ಸ್ಟವ್ ಆಫ್ ಮಾಡಿ. ಬಿಸಿ ಆರಿದ ಮೇಲೆ ಎತ್ತಿಡಿ.
- ನಂತರ ಉಪ್ಪಿಟ್ಟು ಮಾಡಲು ಒಂದು ಬಾಣಲೆಯಲ್ಲಿ ನೀರನ್ನು ಕುದಿಯಲು ಇಡಿ.
- ನೀರು ಕುದಿಯಲಾರಂಭಿಸಿದಾಗ ಅದಕ್ಕೆ ಉಪ್ಪಿಟ್ಟು ಮಿಕ್ಸ್ ಹಾಕಿ ಸ್ವಲ್ಪ ಗಟ್ಟಿಯಾಗುವವರೆಗೆ ಮಗುಚಿ.
- ತೆಂಗಿನತುರಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಮಗುಚಿ. ಸ್ಟೋವ್ ಆಫ್ ಮಾಡಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ