ಗುರುವಾರ, ಡಿಸೆಂಬರ್ 21, 2017

Rave onion dose recipe in Kannada | ರವೆ ಈರುಳ್ಳಿ ದೋಸೆ ಮಾಡುವ ವಿಧಾನ

Rave onion dose recipe in Kannada

Rave onion dose recipe in Kannada | ರವೆ ಈರುಳ್ಳಿ ದೋಸೆ ಮಾಡುವ ವಿಧಾನ


ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

 1. 1 ಕಪ್ ಅಕ್ಕಿ ಹಿಟ್ಟು
 2. 1/4 ಕಪ್ ಮೀಡಿಯಂ ರವೆ
 3. 1/8 ಕಪ್ ಮೈದಾ ಹಿಟ್ಟು
 4. 1 ಟೇಬಲ್ ಚಮಚ ಕಡ್ಲೆಹಿಟ್ಟು (ಬೇಕಾದಲ್ಲಿ)
 5. 2 ಸಣ್ಣಗೆ ಹೆಚ್ಚಿದ ಈರುಳ್ಳಿ
 6. 2.5 ಕಪ್ ನೀರು (ಸ್ವಲ್ಪ ಹೆಚ್ಚು ಕಡಿಮೆ; ದೋಸೆಕಲ್ಲು ಮತ್ತು ಹಿಟ್ಟಿನ ಗುಣಮಟ್ಟ ಅವಲಂಬಿಸಿ)
 7. ಎಣ್ಣೆ ಅಥವಾ ತುಪ್ಪ (ದೋಸೆ ಮಾಡುವಾಗ ಬಳಸಲು)
 8. ಉಪ್ಪು ರುಚಿಗೆ ತಕ್ಕಷ್ಟು

ಪದಾರ್ಥಗಳು (ಬೇಕಾದಲ್ಲಿ): ( ಅಳತೆ ಕಪ್ = 240 ಎಂಎಲ್ )

 1. 1/2 ಟೀಸ್ಪೂನ್ ಜೀರಿಗೆ
 2. 1 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು 
 3. 1 ಟೀಸ್ಪೂನ್ ಹೆಚ್ಚಿದ ಕರಿಬೇವಿನ ಸೊಪ್ಪು 
 4. 5 - 6 ಜಜ್ಜಿದ ಕಾಳುಮೆಣಸು
 5. 1/2 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
 6. 1 ಸಣ್ಣದಾಗಿ ಕೊಚ್ಚಿದ ಹಸಿರು ಮೆಣಸಿನಕಾಯಿ
 7. ಚಿಟಿಕೆ ಇಂಗು
 8. 1 ಟೇಬಲ್ ಚಮಚ ತೆಂಗಿನ ತುರಿ (ನಾನು ಬಳಸಲಿಲ್ಲ)

ರವೆ ಈರುಳ್ಳಿ ದೋಸೆ ಮಾಡುವ ವಿಧಾನ:

 1. ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟು, ರವೆ, ಕಡ್ಲೆಹಿಟ್ಟು ಮತ್ತು ಮೈದಾ ಹಿಟ್ಟು ತೆಗೆದುಕೊಳ್ಳಿ.
 2. ನೀರು ಮತ್ತು ಉಪ್ಪು ಸೇರಿಸಿ ತೆಳುವಾದ ಹಿಟ್ಟು ತಯಾರಿಸಿಕೊಳ್ಳಿ. 
 3. ಜೀರಿಗೆ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಹಸಿರುಮೆಣಸಿನಕಾಯಿ, ಕಾಳುಮೆಣಸು, ಇಂಗು ಮತ್ತು ಶುಂಠಿ ಸೇರಿಸಿ. 
 4. ಚೆನ್ನಾಗಿ ಕಲಸಿ ಪಕ್ಕಕ್ಕಿಡಿ.
 5. ಒಂದು ಬಾಣಲೆಯಲ್ಲಿ ಎರಡು ಚಮಚ ಎಣ್ಣೆ ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿ ತೆಗೆದುಕೊಂಡು ಮೆತ್ತಗಾಗುವವರೆಗೆ ಹುರಿಯಿರಿ. 
 6. ಬಿಸಿ ಆರಿದ ಮೇಲೆ ತಯಾರಿಸಿದ ಹಿಟ್ಟಿಗೆ ಸೇರಿಸಿ. ಅಗತ್ಯವಿದ್ದಷ್ಟು ನೀರು ಸೇರಿಸಿ ತೆಳ್ಳನೆ ಹಿಟ್ಟು ತಯಾರಿಸಿಕೊಳ್ಳಿ.  
 7. ಕಬ್ಬಿಣದ ದೋಸೆ ಕಲ್ಲು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿ ಮಾಡಿ. ದೋಸೆ ಕಲ್ಲು ಕಾದಿದೆಯೇ ಎಂದು ತಿಳಿಯಲು ಎರಡು ಹನಿ ನೀರು ಚಿಮುಕಿಸಿ, ಚರ-ಪರ ಸದ್ದಿನೊಂದಿಗೆ ಆವಿಯಾದಲ್ಲಿ ಕಾದಿದೆ ಎಂದರ್ಥ. ಕಬ್ಬಿಣದ ದೋಸೆ ಕಲ್ಲಾದಲ್ಲಿ ಎಣ್ಣೆ ಹಚ್ಚಿ. 
 8. ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ದೋಸೆ ಕಲ್ಲಿನ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ. 
 9. ಒಂದೈದು ಸೆಕೆಂಡುಗಳ ನಂತರ ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ. ಈ ದೋಸೆಗೆ ಮುಚ್ಚಳ ಮುಚ್ಚ ಬೇಕಾಗಿಲ್ಲ. 
 10. ನಂತರ ಉರಿಯನ್ನು ಕಡಿಮೆ ಮಾಡಿ, 5 - 10 ಸೆಕೆಂಡುಗಳ ಕಾಲ ಬಿಟ್ಟು, ದೋಸೆ ಸಟ್ಟುಗ ಉಪಯೋಗಿಸಿ ದೋಸೆಯನ್ನು ತೆಗೆಯಿರಿ. ದೋಸೆ ಕಲ್ಲಿನ ಮೇಲೆಯೇ ದೋಸೆಯನ್ನು ಮಡಿಸಿ. ತೆಂಗಿನ ಚಟ್ನಿ, ಸಾಂಬಾರ್ ಅಥವಾ ಸಾಗುವಿನೊಂದಿಗೆ ಬಡಿಸಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...