Avarekalu uppittu recipe in kannada | ಅವರೇಕಾಳು ಉಪ್ಪಿಟ್ಟು ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1/2 ಕಪ್ ಉಪ್ಪಿಟ್ಟು ರವೆ
- 1.25 ಕಪ್ ನೀರು
- 1/2 ಕಪ್ ಅವರೇಕಾಳು
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಉದ್ದಿನಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಈರುಳ್ಳಿ
- 1 ಟೊಮ್ಯಾಟೋ
- 2-3 ಹಸಿರು ಮೆಣಸಿನಕಾಯಿ
- 4-5 ಕರಿ ಬೇವಿನ ಎಲೆ
- 1 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
- 1/4 ಟೀಸ್ಪೂನ್ ಅರಶಿನ ಪುಡಿ
- 6-8 ಟೀಸ್ಪೂನ್ ಅಡುಗೆ ಎಣ್ಣೆ
- 1 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- 2 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/2 ಕಪ್ ತೆಂಗಿನತುರಿ
ಅವರೇಕಾಳು ಉಪ್ಪಿಟ್ಟು ಮಾಡುವ ವಿಧಾನ:
- ಅವರೆಕಾಳನ್ನು ಸುಲಿದು, ಬೇಯಿಸಿಟ್ಟುಕೊಳ್ಳಿ.
- ರವೆಯನ್ನು ಒಂದು ಚಮಚ ತುಪ್ಪ ಅಥವಾ ಎಣ್ಣೆಯೊಂದಿಗೆ ಹುರಿದಿಟ್ಟುಕೊಳ್ಳಿ.
- ಈರುಳ್ಳಿ, ಟೊಮ್ಯಾಟೋ, ಶುಂಠಿ, ಕೊತ್ತಂಬರಿ ಸೊಪ್ಪು ಮತ್ತು ಹಸಿರು ಮೆಣಸಿನಕಾಯಿ ಕತ್ತರಿಸಿಟ್ಟು ಕೊಳ್ಳಿ. ಬೇರೆ ಪದಾರ್ಥಗಳನ್ನು ಸಿದ್ಧ ಮಾಡಿಟ್ಟು ಕೊಳ್ಳಿ.
- ಒಂದು ಬಾಣಲೆ ಬಿಸಿಮಾಡಿ, ಎಣ್ಣೆ, ಸಾಸಿವೆ, ಉದ್ದಿನಬೇಳೆ ಮತ್ತು ಕಡ್ಲೆಬೇಳೆ ಹಾಕಿ.
- ಸಾಸಿವೆ ಸಿಡಿದ ಕೂಡಲೇ ಕರಿಬೇವು, ಕತ್ತರಿಸಿದ ಶುಂಠಿ, ಈರುಳ್ಳಿ ಮತ್ತು ಹಸಿರು ಮೆಣಸಿನಕಾಯಿ ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಮಧ್ಯಮ ಉರಿಯಲ್ಲಿ ಹುರಿಯಿರಿ.
- ಈರುಳ್ಳಿ ಮೆತ್ತಗಾದ ಮೇಲೆ ಟೊಮ್ಯಾಟೋ ಹಾಕಿ.
- ಉಪ್ಪು ಮತ್ತು ಅರಶಿನ ಪುಡಿ ಸೇರಿಸಿ. ಟೊಮ್ಯಾಟೋ ಮೆತ್ತಗಾಗುವವರೆಗೆ ಹುರಿಯಿರಿ.
- ಬೇಯಿಸಿದ ಅವರೆಕಾಳನ್ನು ಸೇರಿಸಿ.
- ನೀರು ಹಾಕಿ ಕುದಿಸಿ. ನೀರು ಕುದಿಯಲು ಪ್ರಾರಂಭವಾದ ಕೂಡಲೇ ಹುರಿದಿಟ್ಟ ರವೆಯನ್ನು ನಿಧಾನವಾಗಿ ಹಾಕುತ್ತಾ ಮಗುಚಿ.
- ಸ್ವಲ್ಪ ಗಟ್ಟಿಯಾದ ಮೇಲೆ ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ ಒಂದೆರಡು ನಿಮಿಷ ಬೇಯಲು ಬಿಡಿ.
- ನಂತ್ರ ತೆಂಗಿನತುರಿ, ಕೊತ್ತಂಬರಿ ಸೊಪ್ಪು ಸೇರಿಸಿ ಮಗುಚಿ. ಸ್ಟವ್ ಆಫ್ ಮಾಡಿ, ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ