Southekai paddu recipe in kannada | ಸೌತೆಕಾಯಿ ಪಡ್ದು ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಕಪ್ ಅಕ್ಕಿ ಹಿಟ್ಟು
- 1 ಕಪ್ ತುರಿದ ಮುಳ್ಳು ಸೌತೆಕಾಯಿ
- 2 ಟೇಬಲ್ ಸ್ಪೂನ್ ಮೊಸರು
- 1/2 ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- 1 ಹಸಿರು ಮೆಣಸಿನ ಕಾಯಿ ಸಣ್ಣಗೆ ಹೆಚ್ಚಿದ್ದು
- 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕರಿಬೇವಿನ ಎಲೆ
- 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 2 ಟೇಬಲ್ ಸ್ಪೂನ್ ತೆಂಗಿನ ತುರಿ
- 1/2 ಟೀಸ್ಪೂನ್ ಜೀರಿಗೆ
- ಎಣ್ಣೆ ಪಡ್ಡು ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ಸೌತೆಕಾಯಿ ಪಡ್ದು ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟನ್ನು ತೆಗೆದುಕೊಳ್ಳಿ.
- ಅದಕ್ಕೆ ತುರಿದ ಸೌತೆಕಾಯಿಯನ್ನು ಸೇರಿಸಿ.
- ನಂತ್ರ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕಲಸಿ.
- ಅದಕ್ಕೆ ಎರಡು ಟೇಬಲ್ ಚಮಚದಷ್ಟು ಮೊಸರು ಸೇರಿಸಿ ಕಲಸಿ.
- ನಂತ್ರ ಹೆಚ್ಚಿದ ಈರುಳ್ಳಿ, ಹಸಿರು ಮೆಣಸಿನ ಕಾಯಿ, ಕರಿಬೇವಿನ ಎಲೆ ಮತ್ತು ಕೊತ್ತಂಬರಿ ಸೊಪ್ಪನ್ನು ಸೇರಿಸಿ ಕಲಸಿ.
- ಆಮೇಲೆ ಜೀರಿಗೆ ಮತ್ತು ತೆಂಗಿನತುರಿ ಸೇರಿಸಿ ಕಲಸಿ.
- ಹಿಟ್ಟು ದಪ್ಪ ದೋಸೆ ಹಿಟ್ಟಿನಂತಿರಬೇಕು. ಅಗತ್ಯವಿದ್ದಲ್ಲಿ ನೀರು ಸೇರಿಸಿ ಹಿಟ್ಟು ತಯಾರಿಸಿಕೊಳ್ಳಿ.
- ಪಡ್ಡು ತವಾವನ್ನು ಬಿಸಿಮಾಡಿ ಕೊಳ್ಳಿ. ಗುಳಿಗಳಿಗೆ ಸ್ವಲ್ಪ ಎಣ್ಣೆ ಹಾಕಿ.
- ಹಿಟ್ಟನ್ನು ಹಾಕಿ, ಮುಚ್ಚಳ ಮುಚ್ಚಿ. ಸಣ್ಣ-ಮಧ್ಯಮ ಉರಿಯಲ್ಲಿ ಬೇಯಿಸಿ.
- ಸುಮಾರು ಒಂದು ನಿಮಿಷದ ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಹಾಕಿ.
- ಪಡ್ಡುವನ್ನು ತಿರುಗಿಸಿ ಹಾಕಿ. ಇನ್ನೊಂದು ಬದಿಯೂ ಬೇಯಿಸಿ. ಬಿಸಿ ಅಥವಾ ತಣ್ಣಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ