Southekayi sihi dose recipe in Kannada | ಸೌತೆಕಾಯಿ ಸಿಹಿ ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ದೋಸೆ ಅಕ್ಕಿ
- 1 ಟೇಬಲ್ ಚಮಚ ಮೆಂತೆ
- 1/2 ಕಪ್ ಅವಲಕ್ಕಿ
- 1/2 ಕಪ್ ತೆಂಗಿನ ತುರಿ
- 1 ಮಧ್ಯಮ ಗಾತ್ರದ ಸೌತೆಕಾಯಿ ಅಥವಾ ಒಂದು ಕಪ್ ಸೌತೆಕಾಯಿ
- 1/2 ಕಪ್ ಬೆಲ್ಲ (ನಿಮ್ಮ ರುಚಿಗೆ ತಕ್ಕಂತೆ ಬದಲಾಯಿಸಿ)
- ಉಪ್ಪು ರುಚಿಗೆ ತಕ್ಕಷ್ಟು
- 4 ಟೀಸ್ಪೂನ್ ಎಣ್ಣೆ ಅಥವಾ ತುಪ್ಪ
ಸೌತೆಕಾಯಿ ಸಿಹಿ ದೋಸೆ ಮಾಡುವ ವಿಧಾನ:
- ಅಕ್ಕಿ ಮತ್ತು ಮೆಂತೆಯನ್ನು ತೊಳೆದು 4 - 5 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ.
- ಅವಲಕ್ಕಿಯನ್ನು ತೊಳೆದು 15 ನಿಮಿಷಗಳ ಕಾಲ ನೆನೆಸಿ.
- ನೆನೆಸಿದ ನಂತರ ನೀರನ್ನು ಬಗ್ಗಿಸಿ. ನೆನೆಸಿದ ಅಕ್ಕಿ, ಮೆಂತೆ, ಅವಲಕ್ಕಿ, ತೆಂಗಿನ ತುರಿ ಮತ್ತು ಹೆಚ್ಚಿದ ಸೌತೆಕಾಯಿ ಯನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ನಯವಾಗಿ ಅರೆಯಿರಿ. ರುಬ್ಬುವ ವೇಳೆ ಹೆಚ್ಚು ನೀರು ಸೇರಿಸಬೇಡಿ. ರುಬ್ಬಲು ಬೇಕಾದಷ್ಟು ನೀರನ್ನು ಮಾತ್ರ ಹಾಕಿ.
- ಸೌತೆಕಾಯಿ ಸಿಹಿ ದೋಸೆ ಹಿಟ್ಟು ಅರೆದ ಮೇಲೆ ಒಂದು ಪಾತ್ರೆಗೆ ಹಾಕಿ. ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಷ್ಟು ಗಟ್ಟಿ ಇರಲಿ.
- ಮುಚ್ಚಳ ಮುಚ್ಚಿ 8 - 12 ಘಂಟೆಗಳ ಕಾಲ ಹುದುಗಲು ಬಿಡಿ.
- ಹಿಟ್ಟು ಹುದುಗಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕಲಸಿ.
- ಕಬ್ಬಿಣದ ಕಾವಲಿ ಅಥವಾ ನಾನ್ ಸ್ಟಿಕ್ ಪ್ಯಾನ್ ತೆಗೆದುಕೊಂಡು ಒಲೆ ಮೇಲೆ ಇರಿಸಿ, ಬಿಸಿ ಮಾಡಿ. ಸ್ಟವ್ ಮಧ್ಯಮ ಉರಿಯಲ್ಲಿರಲಿ.
- ಮುಚ್ಚಳವನ್ನು ಮುಚ್ಚಿ ಬೇಯಿಸಿ. ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ. ಬಿಸಿ ದೋಸೆಯನ್ನು ತುಪ್ಪ ಅಥವಾ ಚಟ್ನಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ