Genasina sasive recipe in kannada | ಗೆಣಸಿನ ಸಾಸಿವೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 ಮಧ್ಯಮ ಗಾತ್ರದ ಸಿಹಿಗೆಣಸು
- 1/2 ಕಪ್ ಮೊಸರು
- ಉಪ್ಪು ರುಚಿಗೆ ತಕ್ಕಷ್ಟು.
ಅರೆಯಲು ಬೇಕಾಗುವ ಪದಾರ್ಥಗಳು:
- 1/4 ಟೀಸ್ಪೂನ್ ಸಾಸಿವೆ
- 1/4 ಕಪ್ ತೆಂಗಿನತುರಿ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 2 ಟೀಸ್ಪೂನ್ ಅಡುಗೆ ಎಣ್ಣೆ
- 1/2 ಟೀಸ್ಪೂನ್ ಸಾಸಿವೆ
ಗೆಣಸಿನ ಸಾಸಿವೆ ಮಾಡುವ ವಿಧಾನ:
- ಗೆಣಸನ್ನು ತೊಳೆದು ಬೇಯಿಸಿ.
- ನಂತರ ಸಿಪ್ಪೆ ತೆಗೆದು, ಚೆನ್ನಾಗಿ ಹಿಸುಕಿ ಅಥವಾ ಮ್ಯಾಶ್ ಮಾಡಿ.
- ಸಾಸಿವೆ ಮತ್ತು ತೆಂಗಿನ ತುರಿಯನ್ನು ಮಿಕ್ಸಿ ಜಾರಿಗೆ ಹಾಕಿ, ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆಯಿರಿ.
- ಅರೆದ ಮಿಶ್ರಣವನ್ನು ಹಿಸುಕಿದ ಗೆಣಸಿಗೆ ಹಾಕಿ.
- ರುಚಿಗೆ ತಕ್ಕಷ್ಟು ಉಪ್ಪು, ಮೊಸರು ಮತ್ತು ಅಗತ್ಯವಿದ್ದಷ್ಟು ನೀರು ಹಾಕಿ. ಚೆನ್ನಾಗಿ ಕಲಸಿ. ಹೆಚ್ಚಿನ ಖಾರ ಬೇಕಾದಲ್ಲಿ ಸಣ್ಣಗೆ ಕತ್ತರಿಸಿದ ಹಸಿರುಮೆಣಸಿನಕಾಯಿ ಸೇರಿಸಬಹುದು.
- ಎಣ್ಣೆ, ಒಣಮೆಣಸು ಮತ್ತು ಸಾಸಿವೆ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ