Jolada dose recipe in Kannada | ಜೋಳದ ದೋಸೆ ಮಾಡುವ ವಿಧಾನ
ಜೋಳದ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಜೋಳದ ಹಿಟ್ಟು
- 1/2 ಕಪ್ ಅಕ್ಕಿ ಹಿಟ್ಟು
- 2 ಟೇಬಲ್ ಚಮಚ ರವೆ (ಬೇಕಾದಲ್ಲಿ)
- 1 ಸಣ್ಣಗೆ ಹೆಚ್ಚಿದ ಈರುಳ್ಳಿ
- 1/2 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1 ಟೀಸ್ಪೂನ್ ಹೆಚ್ಚಿದ ಕರಿಬೇವಿನ ಸೊಪ್ಪು
- 1 ಸಣ್ಣದಾಗಿ ಕೊಚ್ಚಿದ ಹಸಿರು ಮೆಣಸಿನಕಾಯಿ
- ಎಣ್ಣೆ ಅಥವಾ ತುಪ್ಪ (ದೋಸೆ ಮಾಡಲು)
- ಉಪ್ಪು ರುಚಿಗೆ ತಕ್ಕಷ್ಟು
ಜೋಳದ ದೋಸೆ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಜೋಳದ ಹಿಟ್ಟು ಮತ್ತು ಅಕ್ಕಿ ಹಿಟ್ಟು ತೆಗೆದುಕೊಳ್ಳಿ.
- ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ ಸೇರಿಸಿ.
- ಆಮೇಲೆ ಜೀರಿಗೆ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಹಸಿರುಮೆಣಸಿನಕಾಯಿ ಮತ್ತು ಉಪ್ಪು ಸೇರಿಸಿ.
- ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತ ತೆಳುವಾದ ಹಿಟ್ಟು ತಯಾರಿಸಿಕೊಳ್ಳಿ. ಆದರೆ ಹಿಟ್ಟು ನೀರು ದೋಸೆ ಅಥವಾ ರವೇ ದೋಸೆಗಿಂತ ಸ್ವಲ್ಪ ಗಟ್ಟಿ ಇರಲಿ.
- ಬೇಕಾದಲ್ಲಿ ಎರಡು ಟೇಬಲ್ ಚಮಚ ರವೇ ಸೇರಿಸಿ. ರವೇ ಸೇರಿಸಿದರೇ ದೋಸೆ ಗರಿಗರಿಯಾಗುವುದು ಮತ್ತು ದೋಸೆ ಮಾಡಲು ಸುಲಭವಾಗುವುದು.
- ಕಬ್ಬಿಣದ ದೋಸೆ ಕಲ್ಲು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿ ಮಾಡಿ. ದೋಸೆ ಕಲ್ಲು ಕಾದಿದೆಯೇ ಎಂದು ತಿಳಿಯಲು ಎರಡು ಹನಿ ನೀರು ಚಿಮುಕಿಸಿ, ಚರ-ಪರ ಸದ್ದಿನೊಂದಿಗೆ ಆವಿಯಾದಲ್ಲಿ ಕಾದಿದೆ ಎಂದರ್ಥ. ಕಬ್ಬಿಣದ ದೋಸೆ ಕಲ್ಲಾದಲ್ಲಿ ಎಣ್ಣೆ ಹಚ್ಚಿ.
- ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ದೋಸೆ ಕಲ್ಲಿನ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ.
- ಮುಚ್ಚಳ ಮುಚ್ಚಿ ಬೇಯಿಸಿ.
- ಒಂದೈದು ಸೆಕೆಂಡುಗಳ ನಂತರ ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ.
- ನಂತರ ಉರಿಯನ್ನು ಕಡಿಮೆ ಮಾಡಿ, 5 - 10 ಸೆಕೆಂಡುಗಳ ಕಾಲ ಬಿಟ್ಟು, ದೋಸೆ ಸಟ್ಟುಗ ಉಪಯೋಗಿಸಿ ದೋಸೆಯನ್ನು ತೆಗೆಯಿರಿ. ದೋಸೆ ಕಲ್ಲಿನ ಮೇಲೆಯೇ ದೋಸೆಯನ್ನು ಮಡಿಸಿ. ತೆಂಗಿನ ಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ