ಶುಕ್ರವಾರ, ಆಗಸ್ಟ್ 10, 2018

Godi dose recipe in Kannada | ಗೋದಿ ದೋಸೆ ಮಾಡುವ ವಿಧಾನ

Godi dose recipe in Kannada

Godi dose recipe in Kannada |  ಗೋದಿ ದೋಸೆ ಮಾಡುವ ವಿಧಾನ

ಗೋದಿ ದೋಸೆ ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

 1. 1 ಕಪ್ ಗೋಧಿ ಹಿಟ್ಟು
 2. 1/4 ಕಪ್ ಅಕ್ಕಿ ಹಿಟ್ಟು
 3. 1/4 ಕಪ್ ರವೆ
 4. 1 ಸಣ್ಣಗೆ ಹೆಚ್ಚಿದ ಈರುಳ್ಳಿ
 5. 1 ಟೀಸ್ಪೂನ್ ಜೀರಿಗೆ
 6. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
 7. 1 ಟೇಬಲ್ ಚಮಚ  ಹೆಚ್ಚಿದ ಕರಿಬೇವಿನ ಸೊಪ್ಪು 
 8. 1 ಸಣ್ಣದಾಗಿ ಕೊಚ್ಚಿದ ಹಸಿರು ಮೆಣಸಿನಕಾಯಿ
 9. ಎಣ್ಣೆ ಅಥವಾ ತುಪ್ಪ (ದೋಸೆ ಮಾಡಲು)
 10. ಉಪ್ಪು ರುಚಿಗೆ ತಕ್ಕಷ್ಟು

ಗೋಧಿ ದೋಸೆ ಮಾಡುವ ವಿಧಾನ:

 1. ಒಂದು ಪಾತ್ರೆಯಲ್ಲಿ ಗೋಧಿ ಹಿಟ್ಟು, ರವೇ ಮತ್ತು ಅಕ್ಕಿ ಹಿಟ್ಟು ತೆಗೆದುಕೊಳ್ಳಿ. ದೋಸೆ ಜಾಸ್ತಿ ಗರಿ ಗರಿ ಬೇಕಾದಲ್ಲಿ ರವೇ ಮತ್ತು ಅಕ್ಕಿಹಿಟ್ಟಿನ ಪ್ರಮಾಣ ಹೆಚ್ಚಿಸಿ. 
 2. ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ ಸೇರಿಸಿ. 
 3. ಆಮೇಲೆ ಜೀರಿಗೆ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಹಸಿರುಮೆಣಸಿನಕಾಯಿ ಮತ್ತು ಉಪ್ಪು ಸೇರಿಸಿ. 
 4. ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತ ತೆಳುವಾದ ಹಿಟ್ಟು ತಯಾರಿಸಿಕೊಳ್ಳಿ. ಆದರೆ ಹಿಟ್ಟು ನೀರು ದೋಸೆ ಅಥವಾ ರವೇ ದೋಸೆಗಿಂತ ಸ್ವಲ್ಪ ಗಟ್ಟಿ ಇರಲಿ.  ನಾನು ಸುಮಾರು ಎರಡೂವರೆ ಕಪ್ ನೀರು ಬಳಸಿದ್ದೇನೆ. 
 5. ಕಬ್ಬಿಣದ ದೋಸೆ ಕಲ್ಲು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿ ಮಾಡಿ. ದೋಸೆ ಕಲ್ಲು ಕಾದಿದೆಯೇ ಎಂದು ತಿಳಿಯಲು ಎರಡು ಹನಿ ನೀರು ಚಿಮುಕಿಸಿ, ಚರ-ಪರ ಸದ್ದಿನೊಂದಿಗೆ ಆವಿಯಾದಲ್ಲಿ ಕಾದಿದೆ ಎಂದರ್ಥ. ಕಬ್ಬಿಣದ ದೋಸೆ ಕಲ್ಲಾದಲ್ಲಿ ಎಣ್ಣೆ ಹಚ್ಚಿ. 
 6. ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ದೋಸೆ ಕಲ್ಲಿನ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ. 
 7. ಮುಚ್ಚಳ ಮುಚ್ಚಿ ಬೇಯಿಸಿ. 
 8. ಒಂದೈದು ಸೆಕೆಂಡುಗಳ ನಂತರ ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ.
 9. ನಂತರ ಉರಿಯನ್ನು ಕಡಿಮೆ ಮಾಡಿ, 5 - 10 ಸೆಕೆಂಡುಗಳ ಕಾಲ ಬಿಟ್ಟು, ದೋಸೆ ಸಟ್ಟುಗ ಉಪಯೋಗಿಸಿ ದೋಸೆಯನ್ನು ತೆಗೆಯಿರಿ. ದೋಸೆ ಕಲ್ಲಿನ ಮೇಲೆಯೇ ದೋಸೆಯನ್ನು ಮಡಿಸಿ. ತೆಂಗಿನ ಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...