Karibevu soppina ricebath recipe in Kannada | ಕರಿಬೇವು ಸೊಪ್ಪಿನ ರೈಸ್ ಬಾತ್ ಮಾಡುವ ವಿಧಾನ
ಕರಿಬೇವು ಸೊಪ್ಪು ರೈಸ್ ಬಾತ್ ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1 ಕಪ್ ಸೋನಾ ಮಸೂರಿ ಅಕ್ಕಿ
- 4 ಟೇಬಲ್ ಚಮಚ ಅಡುಗೆ ಎಣ್ಣೆ
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 4 - 5 ಕರಿಬೇವಿನ ಎಲೆ
- 2 ಟೇಬಲ್ ಚಮಚ ನೆಲಗಡಲೆ
- 1/2 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1/2 ನೆಲ್ಲಿಕಾಯಿ ಗಾತ್ರದ ಬೆಲ್ಲ
- 1/4 ಟೀಸ್ಪೂನ್ ಅರಶಿನ ಪುಡಿ
- ಉಪ್ಪು ರುಚಿಗೆ ತಕ್ಕಷ್ಟು
- 1 ಕಪ್ ಸೋನಾ ಮಸೂರಿ ಅಕ್ಕಿ
- 4 ಟೇಬಲ್ ಚಮಚ ಅಡುಗೆ ಎಣ್ಣೆ
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 4 - 5 ಕರಿಬೇವಿನ ಎಲೆ
- 2 ಟೇಬಲ್ ಚಮಚ ನೆಲಗಡಲೆ
- 1/2 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1/2 ನೆಲ್ಲಿಕಾಯಿ ಗಾತ್ರದ ಬೆಲ್ಲ
- 1/4 ಟೀಸ್ಪೂನ್ ಅರಶಿನ ಪುಡಿ
- ಉಪ್ಪು ರುಚಿಗೆ ತಕ್ಕಷ್ಟು
ಮಸಾಲೆ ಪುಡಿಗೆ ಬೇಕಾಗುವ ಪದಾರ್ಥಗಳು:
- 2 - 4 ಕೆಂಪು ಮೆಣಸಿನಕಾಯಿ (ಮಧ್ಯಮ ಖಾರ)
- 2 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕಡಲೆಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/4 ಕಪ್ ತೆಂಗಿನ ತುರಿ
- 2 - 4 ಕೆಂಪು ಮೆಣಸಿನಕಾಯಿ (ಮಧ್ಯಮ ಖಾರ)
- 2 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕಡಲೆಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/4 ಕಪ್ ತೆಂಗಿನ ತುರಿ
ಕರಿಬೇವು ಸೊಪ್ಪಿನ ರೈಸ್ ಬಾತ್ ಮಾಡುವ ವಿಧಾನ:
- ಮೊದಲಿಗೆ ಉದುರು ಉದುರಾದ ಅನ್ನ ಮಾಡಿಟ್ಟು ಕೊಳ್ಳಿ.
- ನಂತರ "ಮಸಾಲೆ ಪುಡಿ" ಗೆ ಪಟ್ಟಿ ಮಾಡಿದ ಪದಾರ್ಥಗಳನ್ನು ಹುರಿದು ಪುಡಿಮಾಡಿಟ್ಟುಕೊಳ್ಳಬೇಕು.
- ಮೆಣಸಿನಕಾಯಿ, ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಕೊತ್ತಂಬರಿ ಬೀಜ ಹುರಿದು ಪುಡಿಮಾಡಿ.
- ನಂತ್ರ ಅದಕ್ಕೆ ತೆಂಗಿನತುರಿ ಸೇರಿಸಿ ಪುನಃ ಹುಡಿ ಮಾಡಿ ತೆಗೆದಿಟ್ಟು ಕೊಳ್ಳಿ.
- ಆಮೇಲೆ 4 ಟೇಬಲ್ ಚಮಚ ಅಡುಗೆ ಎಣ್ಣೆಯನ್ನು ಒಂದು ಬಾಣಲೆಯಲ್ಲಿ ತೆಗೆದುಕೊಂಡು ಬಿಸಿ ಮಾಡಿ.
- ನೆಲಗಡಲೆ ಹಾಕಿ ಹುರಿಯಿರಿ.
- ಸಾಸಿವೆ, ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಕರಿಬೇವು ಮತ್ತು ಅರಿಶಿನ ಪುಡಿ ಸೇರಿಸಿ.
- ನಂತರ ಉಪ್ಪು, ಬೆಲ್ಲ ಮತ್ತು ಹುಣಿಸೆರಸ ಸೇರಿಸಿ.
- ಕೊನೆಯಲ್ಲಿ ಮಸಾಲೆ ಪುಡಿ ಹಾಕಿ. ಚೆನ್ನಾಗಿ ಮಗುಚಿ. ಸ್ಟವ್ ಆಫ್ ಮಾಡಿ.
- ಬೇಯಿಸಿಟ್ಟ ಅನ್ನ ಹಾಕಿ ಕಲಸಿ. ಬಿಸಿ ಬಿಸಿಯಾಗಿ ಬಡಿಸಿ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ