Nimbe hannina saaru recipe in Kannada | ನಿಂಬೆಹಣ್ಣಿನ ಸಾರು ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/4 ಕಪ್ ತೊಗರಿಬೇಳೆ (ಅಥವಾ ಹೆಸರುಬೇಳೆ)
- 2 - ೩ ಹಸಿರು ಮೆಣಸಿನ ಕಾಯಿ (ನಿಮ್ಮ ಖಾರಕ್ಕೆ ತಕ್ಕಂತೆ)
- 2 ಕಪ್ ನೀರು
- 4 ಚಮಚ ಲಿಂಬೆಹಣ್ಣಿನ ರಸ (ರುಚಿಗೆ ತಕ್ಕಂತೆ ಬದಲಾಯಿಸಿ)
- 1/4 ಚಮಚ ಅರಶಿನ ಪುಡಿ
- ಉಪ್ಪು ರುಚಿಗೆ ತಕ್ಕಷ್ಟು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಜೀರಿಗೆ
- 1/4 ಟೀಸ್ಪೂನ್ ಮೆಂತೆ
- ಒಂದು ದೊಡ್ಡ ಚಿಟಿಕೆ ಇಂಗು
- 7 - 8 ಕರಿಬೇವಿನ ಎಲೆ
- 1 ಟೇಬಲ್ ಚಮಚ ಅಡುಗೆ ಎಣ್ಣೆ
ನಿಂಬೆಹಣ್ಣಿನ ಸಾರು ಮಾಡುವ ವಿಧಾನ:
- ತೊಗರಿಬೇಳೆಯನ್ನು ತೊಳೆದು ಒಂದು ಕಪ್ ನೀರು, ಒಂದೆರಡು ಹನಿ ಎಣ್ಣೆ ಮತ್ತು ಅರಶಿನ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
- ಬೇಯಿಸಿದ ಬೆಳೆಯನ್ನು ಸೌಟಿನ ಹಿಂಭಾಗದಿಂದ ಚೆನ್ನಾಗಿ ಮಸಿದುಕೊಳ್ಳಿ.
- ಮಸಿದ ಬೇಳೆಗೆ ಇನ್ನೊಂದು ಕಪ್ ನೀರು, ಹಸಿರು ಮೆಣಸಿನ ಕಾಯಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿ.
- ಕುದಿಯುವಾಗ ಕೊತ್ತಂಬರಿ ಸೊಪ್ಪು ಸೇರಿಸಿ.
- ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ.
- ಸ್ಟವ್ ಆಫ್ ಮಾಡಿದ ಕೂಡಲೇ ಲಿಂಬೆ ಹಣ್ಣಿನ ರಸ ಸೇರಿಸಿ.
- ಎಣ್ಣೆ, ಒಣಮೆಣಸು, ಸಾಸಿವೆ, ಜೀರಿಗೆ, ಮೆಂತೆ, ಕರಿಬೇವು ಮತ್ತು ಇಂಗಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ