Nuggekai palya recipe in Kannada | ನುಗ್ಗೆಕಾಯಿ ಪಲ್ಯ ಮಾಡುವ ವಿಧಾನ
ನುಗ್ಗೆಕಾಯಿ ಪಲ್ಯ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 3 - 4 ನುಗ್ಗೆ ಕಾಯಿ
- 1 ಕತ್ತರಿಸಿದ ಈರುಳ್ಳಿ
- 1 ಕತ್ತರಿಸಿದ ಟೊಮೇಟೊ
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 7 - 8 ಕರಿಬೇವು
- 1/2 - 1 ಟೀಸ್ಪೂನ್ ಕೆಂಪು ಮೆಣಸಿನಕಾಯಿ ಪುಡಿ
- 1 ಟೀಸ್ಪೂನ್ ಕೊತ್ತಂಬರಿ ಅಥವಾ ಧನಿಯಾ ಪುಡಿ
- 1/4 ಟೀಸ್ಪೂನ್ ಅರಿಶಿನ ಪುಡಿ
- ದೊಡ್ಡ ಚಿಟಿಕೆ ಇಂಗು
- 1/4 ಕಪ್ ತೆಂಗಿನತುರಿ
- 1 ಟೇಬಲ್ ಚಮಚ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
ನುಗ್ಗೆಕಾಯಿ ಪಲ್ಯ ಮಾಡುವ ವಿಧಾನ:
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ ಮತ್ತು ಜೀರಿಗೆ ಒಗ್ಗರಣೆ ಮಾಡಿ.
- ಸಾಸಿವೆ ಸಿಡಿದ ಮೇಲೆ ಕರಿಬೇವು ಮತ್ತು ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಹುರಿಯಿರಿ.
- ಆಮೇಲೆ ಸಣ್ಣಗೆ ಕತ್ತರಿಸಿದ ಟೊಮೇಟೊ ಹಾಕಿ ಬಾಡಿಸಿ.
- ಅದಕ್ಕೆ ಕೆಂಪು ಮೆಣಸಿನಕಾಯಿ ಪುಡಿ, ಕೊತ್ತಂಬರಿ ಅಥವಾ ಧನಿಯಾ ಪುಡಿ ಮತ್ತು ಇಂಗು ಹಾಕಿ ಮಗುಚಿ.
- ಆಮೇಲೆ ಕತ್ತರಿಸಿದ ನುಗ್ಗೆಕಾಯಿಯನ್ನು ಹಾಕಿ.
- ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
- 1/2 ಕಪ್ ನೀರು ಹಾಕಿ ನುಗ್ಗೆಕಾಯಿ ಮೆತ್ತಗಾಗುವವರೆಗೆ ಬೇಯಿಸಿ. ಒಂದು ಹತ್ತು ನಿಮಿಷ ಸಾಕಾಗುತ್ತದೆ.
- ಕೊನೆಯಲ್ಲಿ ತೆಂಗಿನತುರಿ ಹಾಕಿ ಮಗುಚಿ.
- ಸ್ಟವ್ ಆಫ್ ಮಾಡಿ. ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ