Onion coriander leaves chutney recipe in Kannada | ಈರುಳ್ಳಿ ಮತ್ತು ಕೊತ್ತಂಬರಿ ಸೊಪ್ಪು ಚಟ್ನಿ ಮಾಡುವ ವಿಧಾನ
ಈರುಳ್ಳಿ ಮತ್ತು ಕೊತ್ತಂಬರಿ ಸೊಪ್ಪು ಚಟ್ನಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಈರುಳ್ಳಿ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉದ್ದಿನಬೇಳೆ
- 2 - 4 ಹಸಿರು ಮೆಣಸಿನಕಾಯಿ
- 4 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
- ಉಪ್ಪು ರುಚಿಗೆ ತಕ್ಕಷ್ಟು
- 2 ಚಮಚ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಉದ್ದಿನಬೇಳೆ
- 4 - 5 ಕರಿಬೇವಿನ ಎಲೆ
- 2 ಟೇಬಲ್ ಚಮಚ ಅಡುಗೆ ಎಣ್ಣೆ
ಈರುಳ್ಳಿ ಮತ್ತು ಕೊತ್ತಂಬರಿ ಸೊಪ್ಪು ಚಟ್ನಿ ಮಾಡುವ ವಿಧಾನ:
- ಈರುಳ್ಳಿ ಮತ್ತು ಹಸಿರುಮೆಣಸಿನಕಾಯಿಯನ್ನು ಕತ್ತರಿಸಿಟ್ಟುಕೊಳ್ಳಿ.
- ಒಂದು ಬಾಣಲೆಯಲ್ಲಿ ಎರಡು ಚಮಚ ಎಣ್ಣೆ ಬಿಸಿ ಮಾಡಿ.
- ಕಡ್ಲೆಬೇಳೆ ಮತ್ತು ಉದ್ದಿನಬೇಳೆ ಹಾಕಿ ಹುರಿಯಿರಿ.
- ನಂತ್ರ ಕತ್ತರಿಸಿದ ಈರುಳ್ಳಿ ಮತ್ತು ಹಸಿರುಮೆಣಸಿನಕಾಯಿ ಹಾಕಿ. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ಆಮೇಲೆ ಕೊತ್ತಂಬರಿ ಸೊಪ್ಪು ಹಾಕಿ ಹುರಿಯಿರಿ.
- ಕೊನೆಯಲ್ಲಿ ತೆಂಗಿನತುರಿ ಹಾಕಿ, ಮಗುಚಿ ಸ್ಟವ್ ಆಫ್ ಮಾಡಿ.
- ಉಪ್ಪು ಮತ್ತು ಹುಣಿಸೇಹಣ್ಣು ಸೇರಿಸಿ.
- ಬಿಸಿ ಆರಿದ ಮೇಲೆ ಮಿಕ್ಸಿಯಲ್ಲಿ ಅರೆದಿಟ್ಟುಕೊಳ್ಳಿ.
- ಕೊನೆಯಲ್ಲಿ ಮೆಣಸಿನಕಾಯಿ, ಎಣ್ಣೆ, ಸಾಸಿವೆ, ಉದ್ದಿನಬೇಳೆ ಮತ್ತು ಕರಿಬೇವಿನ ಒಗ್ಗರಣೆಯನ್ನು ಮಾಡಿ.
- ದೋಸೆ ಅಥವಾ ಇಡ್ಲಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ