Goddu saaru recipe in Kannada | ಗೊಡ್ಡು ಸಾರು ಮಾಡುವ ವಿಧಾನ
ಗೊಡ್ಡು ಸಾರು ವಿಡಿಯೋ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)
- 2 ಟೇಬಲ್ ಚಮಚ ತೊಗರಿಬೇಳೆ
- 1 ಟೇಬಲ್ ಚಮಚ ಕೊತ್ತಂಬರಿ ಬೀಜ ಅಥವಾ ಧನಿಯಾ
- 2 - 4 ಒಣಮೆಣಸಿನಕಾಯಿ
- 1/4 ಕಪ್ ತೆಂಗಿನ ತುರಿ
- 1 ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- 1 ಸಣ್ಣ ನೆಲ್ಲಿಕಾಯಿ ಗಾತ್ರದ ಬೆಲ್ಲ (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- 2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- ಚಿಟಿಕೆ ಅರಿಶಿನ
- 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಚಮಚ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 1 ಒಣಮೆಣಸಿನಕಾಯಿ
- ಇಂಗು ಒಂದು ಚಿಟಿಕೆ
- 5 - 6 ಕರಿಬೇವಿನ ಎಲೆ
- 1 ಟೇಬಲ್ ಚಮಚ ತುಪ್ಪ (ಅಥವಾ ಎಣ್ಣೆ)
ಗೊಡ್ಡು ಸಾರು ಮಾಡುವ ವಿಧಾನ:
- ಒಂದು ಬಾಣಲೆಯಲ್ಲಿ ತೊಗರಿಬೇಳೆ, ಕೊತ್ತಂಬರಿ ಬೀಜ ಮತ್ತು ಒಣಮೆಣಸನ್ನು ಒಂದು ಚಮಚ ಎಣ್ಣೆಯಲ್ಲಿ ಹುರಿಯಿರಿ.
- ಬೇಳೆಗಳು ಕಂದು ಬಣ್ಣ ಬಂದು, ಸುವಾಸನೆ ಬರುವವರೆಗೆ ಹುರಿಯಬೇಕು.
- ಬಿಸಿ ಆರಿದ ಮೇಲೆ, ತೆಂಗಿನತುರಿಯೊಂದಿಗೆ ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆದು ಪಕ್ಕಕ್ಕಿಡಿ.
- ಆಮೇಲೆ ಅದೇ ಬಾಣಲೆಯಲ್ಲಿ ತುಪ್ಪ (ಅಥವಾ ಎಣ್ಣೆ), 1/2 ಚಮಚ ಸಾಸಿವೆ, 1/2 ಚಮಚ ಜೀರಿಗೆ, ಒಣಮೆಣಸು, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಅದಕ್ಕೆ ಉಪ್ಪು, ಬೆಲ್ಲ, ಹುಣಿಸೆ ರಸ, ಚಿಟಿಕೆ ಅರಿಶಿನ ಮತ್ತು ಒಂದು ಲೋಟ ನೀರು ಸೇರಿಸಿ ಕುದಿಸಿ.
- ಅರೆದ ಮಸಾಲೆಯನ್ನು ಸೇರಿಸಿ ಕುದಿಸುವುದನ್ನು ಮುಂದುವರೆಸಿ.
- ಚೆನ್ನಾಗಿ ಕುದಿಸಿ, ಕೊತ್ತಂಬರಿ ಸೊಪ್ಪು ಸೇರಿಸಿ, ಸ್ಟವ್ ಆಫ್ ಮಾಡಿ.
- ಬಿಸಿಯಾದ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ