Batani usli recipe in Kannada | ಬಟಾಣಿ ಉಸ್ಲಿ ಮಾಡುವ ವಿಧಾನ
ಬಟಾಣಿ ಉಸ್ಲಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಒಣ ಬಟಾಣಿ
- 2 ಚಮಚ ಅಡುಗೆ ಎಣ್ಣೆ
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ಉದ್ದಿನಬೇಳೆ
- 1 ಒಣಮೆಣಸಿನಕಾಯಿ
- 1 - 2 ಹಸಿರು ಮೆಣಸಿನಕಾಯಿ
- 4 - 5 ಕರಿಬೇವಿನ ಎಲೆ
- 1 ಸೆಮೀ ಉದ್ದದ ಶುಂಠಿ
- ಎರಡು ಚಿಟಿಕೆ ಅರಿಶಿನ ಪುಡಿ
- ಒಂದು ದೊಡ್ಡ ಚಿಟಿಕೆ ಇಂಗು
- 1/4 ಕಪ್ ತೆಂಗಿನ ತುರಿ
- 2 ಟೇಬಲ್ ಚಮಚ ಕೊತಂಬರಿ ಸೊಪ್ಪು
- 2 ಟೀಸ್ಪೂನ್ ಲಿಂಬೆ ರಸ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು.
ಬಟಾಣಿ ಉಸ್ಲಿ ಮಾಡುವ ವಿಧಾನ:
- ಬಟಾಣಿಯನ್ನು ಒಂದು ದಿನ ನೆನೆಸಿ.
- ಅಗತ್ಯವಿದ್ದಷ್ಟು ನೀರು ಹಾಕಿ, ಉಪ್ಪು ಮತ್ತು ಚಿಟಿಕೆ ಅರಿಶಿನ ಸೇರಿಸಿ ಕುಕ್ಕರ್ ನಲ್ಲಿ ಮೆತ್ತಗೆ ಬೇಯಿಸಿಕೊಳ್ಳಿ.
- ಬೇಯಿಸಿದ ನಂತರ ನೀರು ಬಸಿದು ಪಕ್ಕಕ್ಕಿಡಿ.
- ನಂತರ ಒಂದು ಬಾಣಲೆಯನ್ನು ತೆಗೆದುಕೊಳ್ಳಿ. ಎಣ್ಣೆ ಬಿಸಿ ಮಾಡಿ, ಸಾಸಿವೆ ಮತ್ತು ಜೀರಿಗೆ ಹಾಕಿ.
- ಕಡ್ಲೆಬೇಳೆ ಮತ್ತು ಉದ್ದಿನಬೇಳೆ ಸೇರಿಸಿ.
- ಸಾಸಿವೆ ಸಿಡಿದ ಮೇಲೆ ಒಣಮೆಣಸಿನಕಾಯಿ, ಹಸಿರು ಮೆಣಸಿನಕಾಯಿ, ಕತ್ತರಿಸಿದ ಶುಂಠಿ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆ ತಯಾರಿಸಿ.
- ಅರಿಶಿನ ಪುಡಿ ಮತ್ತು ಇಂಗು ಸೇರಿಸಿ ಮಗುಚಿ.
- ಅದಕ್ಕೆ ಬೇಯಿಸಿದ ಬಟಾಣಿಯನ್ನು ಹಾಕಿ ಮಗುಚಿ.
- ತೆಂಗಿನ ತುರಿ ಮತ್ತು ಕೊತಂಬರಿ ಸೊಪ್ಪು ಸೇರಿಸಿ. ಅಗತ್ಯವಿದ್ದಲ್ಲಿ ಉಪ್ಪು ಹೊಂದಿಸಿ. ಚೆನ್ನಾಗಿ ಮಗುಚಿ ಸ್ಟವ್ ಆಫ್ ಮಾಡಿ.
- ಕೊನೆಯಲ್ಲಿ ಬೇಕಾದಲ್ಲಿ ಲಿಂಬೆರಸ ಸೇರಿಸಿ. ಚಹಾದೊಂದಿಗೆ ಸವಿದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ