Sabbakki idli recipe in Kannada | ಸಬ್ಬಕ್ಕಿ ಇಡ್ಲಿ ಮಾಡುವ ವಿಧಾನ
ಸಬ್ಬಕ್ಕಿ ಇಡ್ಲಿ ವೀಡಿಯೊ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಕಪ್ ಸಬ್ಬಕ್ಕಿ
- 1/2 ಕಪ್ ಇಡ್ಲಿರವೇ
- 1 ಕಪ್ ಮೊಸರು (ಸ್ವಲ್ಪ ಹುಳಿ ಇರಲಿ)
- ಉಪ್ಪು ನಿಮ್ಮ ರುಚಿ ಪ್ರಕಾರ
ಹೆಚ್ಚುವರಿ ಪದಾರ್ಥಗಳು (ಬೇಕಾದಲ್ಲಿ): ( ಅಳತೆ ಕಪ್ = 240 ಎಂಎಲ್ )
- 2 ಟೇಬಲ್ ಚಮಚ ತೆಂಗಿನತುರಿ
- 1 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 2 ಚಮಚ ಎಣ್ಣೆ
- 1/2 ಚಮಚ ಸಾಸಿವೆ
- 2 ಟೇಬಲ್ ಚಮಚ ಗೋಡಂಬಿ
- ಸಣ್ಣಗೆ ಕತ್ತರಿಸಿದ ಹಸಿಮೆಣಸು ಸ್ವಲ್ಪ
- ಸಣ್ಣಗೆ ಕತ್ತರಿಸಿದ ಕರಿಬೇವು ಸ್ವಲ್ಪ
ಸಬ್ಬಕ್ಕಿ ಇಡ್ಲಿ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಸಬ್ಬಕ್ಕಿ, ಇಡ್ಲಿ ರವೆ ಮತ್ತು ಮೊಸರನ್ನು ತೆಗೆದುಕೊಳ್ಳಿ.
- ಅಗತ್ಯವಿದ್ದಲ್ಲಿ ಸ್ವಲ್ಪ ನೀರನ್ನು ಸೇರಿಸಿ, ಹಿಟ್ಟನ್ನು ಕಲಸಿ. 7 - 8 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- ಹಿಟ್ಟು ಹುಳಿ ಬಂದ ಮೇಲೆ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ, ಚೆನ್ನಾಗಿ ಕಲಸಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ, ಹಿಟ್ಟನ್ನು ದಪ್ಪ ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಈ ಹಿಟ್ಟಿನಿಂದ ಸಾದಾ ಇಡ್ಲಿ ಮಾಡಬಹುದು. ಅಥವಾ...
- ತೆಂಗಿನತುರಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ.
- ಎಣ್ಣೆ, ಸಾಸಿವೆ, ಗೋಡಂಬಿ, ಹಸಿಮೆಣಸು ಮತ್ತು ಕರಿಬೇವಿನ ಒಗ್ಗರಣೆ ಮಾಡಿ ಸೇರಿಸಿ. ಚೆನ್ನಾಗಿ ಕಲಸಿ. ಇಡ್ಲಿಹಿಟ್ಟು ತಯಾರಾಯಿತು.
- ಇಡ್ಲಿ ತಟ್ಟೆಗಳಿಗೆ ಎಣ್ಣೆ ಅಥವಾ ತುಪ್ಪ ಸವರಿ ಇಡ್ಲಿ ಹಿಟ್ಟನ್ನು ಹಾಕಿ.
- ಇಡ್ಲಿ ಪಾತ್ರೆಯಲ್ಲಿ ನೀರು ಕುದಿಯಲು ಪ್ರಾರಂಭವಾದ ಮೇಲೆ ಇಡ್ಲಿ ತಟ್ಟೆಗಳನ್ನಿಡಿ. ೧೦ - ೧೨ ನಿಮಿಷಗಳ ಕಾಲ ಬೇಯಿಸಿ. ಒಂದೆರಡು ನಿಮಿಷ ಬಿಟ್ಟು ಇಡ್ಲಿಯನ್ನು ತೆಗೆಯಿರಿ. ಖಾರ ಚಟ್ನಿ ಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ