Devasthana style sambar recipe in Kannada | ದೇವಸ್ಥಾನ ಶೈಲಿಯ ಸಾಂಬಾರ್ ಮಾಡುವ ವಿಧಾನ
ದೇವಸ್ಥಾನ ಶೈಲಿಯ ಸಾಂಬಾರ್ ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 2 ಕಪ್ ತರಕಾರಿ (ಚೀನಿಕಾಯಿ, ಆಲೂಗಡ್ಡೆ, ಸೋರೆಕಾಯಿ, ಬೀನ್ಸ್, ಕ್ಯಾರಟ್, ಕುಂಬಕಾಯಿ, ಟೊಮೇಟೊ, ಸೌತೆಕಾಯಿ, ನುಗ್ಗೆಕಾಯಿ ಇತ್ಯಾದಿ)
- 1/4 ಕಪ್ ತೊಗರಿಬೇಳೆ
- 1/4 ಟೀಸ್ಪೂನ್ ಅರಿಶಿನ ಪುಡಿ
- 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 1 ಟೀಸ್ಪೂನ್ ಬೆಲ್ಲ
- ಗೋಲಿ ಗಾತ್ರದ ಹುಣಿಸೇಹಣ್ಣು
- ಸ್ವಲ್ಪ ಕೊತ್ತಂಬರಿ ಸೊಪ್ಪು
ಮಸಾಲೆಗೆ ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನ ತುರಿ
- 2 - 4 ಒಣ ಮೆಣಸಿನಕಾಯಿ
- 3/4 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 7 - 8 ಮೆಂತ್ಯ ಕಾಳು
- ಒಂದು ಚಿಟಿಕೆ ಇಂಗು
- ಸ್ವಲ್ಪ ಕರಿಬೇವು
- 1/2 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 5 - 6 ಕರಿಬೇವು
- 1/4 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ದೇವಸ್ಥಾನ ಶೈಲಿಯ ಸಾಂಬಾರ್ ಮಾಡುವ ವಿಧಾನ:
- ತರಕಾರಿಗಳನ್ನು ಕತ್ತರಿಸಿಟ್ಟುಕೊಳ್ಳಿ. ಬೇಗ ಬೇಯುವ ತರಕಾರಿಯನ್ನು ಸ್ವಲ್ಪ ದೊಡ್ಡದಾಗಿ ಕತ್ತರಿಸಿ.
- ಬೇಳೆಯನ್ನು ಒಂದು ಕುಕ್ಕರ್ ನಲ್ಲಿ ತೆಗೆದುಕೊಂಡು ತೊಳೆಯಿರಿ. 1/2 ಕಪ್ ನೀರು, ಚಿಟಿಕೆ ಅರಶಿನ ಪುಡಿ ಮತ್ತು ಒಂದೆರಡು ಹನಿ ಎಣ್ಣೆ ಹಾಕಿ. ಬೇಳೆಯನ್ನು ಬೇಯಿಸಿ.
- ಈಗ ಅದೇ ಕುಕ್ಕರ್ ಗೆ ಕತ್ತರಿಸಿದ ತರಕಾರಿ ಮತ್ತು ಸ್ವಲ್ಪ ಉಪ್ಪು ಹಾಕಿ. 1 ಲೋಟ ನೀರು ಹಾಕಿ ಬೇಯಿಸಿ.
- ಆ ಸಮಯದಲ್ಲಿ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕಡ್ಲೆಬೇಳೆ, ಕೊತ್ತಂಬರಿ ಬೀಜ, ಜೀರಿಗೆ ಮತ್ತು ಮೆಂತೆಯನ್ನು 1/2 ಟೀಸ್ಪೂನ್ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಬೇಳೆಗಳು ಕಂದು ಬಣ್ಣಕ್ಕೆ ಬರುವರೆಗೆ ಹುರಿಯಿರಿ.
- ಸ್ಟವ್ ಆಫ್ ಮಾಡಿ, ಕರಿಬೇವು ಮತ್ತು ಇಂಗು ಸೇರಿಸಿ ಹುರಿಯಿರಿ.
- ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. ಬೆಲ್ಲ, ಉಪ್ಪು ಮತ್ತು ಹುಣಿಸೆ ರಸ ಸೇರಿಸಿ. ನಿಮ್ಮ ರುಚಿ ಪ್ರಕಾರ ಉಪ್ಪು, ಸಿಹಿ ಮತ್ತು ಹುಳಿಯನ್ನು ಸರಿಮಾಡಿಕೊಳ್ಳಿ.
- ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ. ಸ್ಟವ್ ಆಫ್ ಮಾಡಿ.
- ಒಣ ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ