Akki hittina dose recipe in Kannada | ದಿಢೀರ್ ಅಕ್ಕಿ ಹಿಟ್ಟಿನ ದೋಸೆ ಮಾಡುವ ವಿಧಾನ
ಅಕ್ಕಿ ಹಿಟ್ಟಿನ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಅಕ್ಕಿ ಹಿಟ್ಟು
- 1 ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- ಸ್ವಲ್ಪ ಕೊತ್ತಂಬರಿ ಸೊಪ್ಪು
- 1 - 2 ಹಸಿಮೆಣಸಿನಕಾಯಿ
- 1 ಚಮಚ ಜೀರಿಗೆ
- 2 ಟೇಬಲ್ ಚಮಚ ತೆಂಗಿನ ತುರಿ
- ಉಪ್ಪು ರುಚಿಗೆ ತಕ್ಕಷ್ಟು
- ಎಣ್ಣೆ ಅಥವಾ ತುಪ್ಪ ದೋಸೆ ಮಾಡಲು
ದಿಢೀರ್ ಅಕ್ಕಿ ಹಿಟ್ಟಿನ ದೋಸೆ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟು ತೆಗೆದುಕೊಳ್ಳಿ.
- ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹಸಿಮೆಣಸಿನಕಾಯಿ ಸೇರಿಸಿ.
- ಜೀರಿಗೆ ಸೇರಿಸಿ.
- ತೆಂಗಿನತುರಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
- ಸ್ವಲ್ಪ ಸ್ವಲ್ಪ ನೀರು ಸೇರಿಸಿ, ತೆಳುವಾದ ದೋಸೆ ಹಿಟ್ಟು ತಯಾರಿಸಿಕೊಳ್ಳಿ.
- ದೋಸೆ ಹಿಟ್ಟು ರವೇ ದೋಸೆ ಅಥವಾ ನೀರುದೋಸೆಗಿಂತ ಸ್ವಲ್ಪ ಗಟ್ಟಿ ಇರಲಿ.
- ಕಬ್ಬಿಣದ ಕಾವಲಿ ತೆಗೆದುಕೊಂಡು ಒಲೆ ಮೇಲೆ ಇರಿಸಿ. ಈ ದೋಸೆ ಮಾಡಲು ಕಾವಲಿ ಚೆನ್ನಾಗಿ ಕಾದಿರ ಬೇಕು. ನಾನ್-ಸ್ಟಿಕ್ ತವವನ್ನು ಸಹ ಬಳಸಬಹುದು.
- ಕಾವಲಿಗೆ ಎಣ್ಣೆ ಹಚ್ಚಿ. ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ಕಾವಲಿ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ.
- ಸುಮಾರು 10 ಸೆಕೆಂಡುಗಳ ಕಾಲ ಮುಚ್ಚಳವನ್ನು ಮುಚ್ಚಿ.
- ನಂತರ ಮುಚ್ಚಳ ತೆರೆದು, ಉರಿಯನ್ನು ಕಡಿಮೆ ಮಾಡಿ.
- ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ 5 ಸೆಕೆಂಡುಗಳ ಕಾಲ ಬಿಟ್ಟು, ದೋಸೆ ಸಟ್ಟುಗ ಉಪಯೋಗಿಸಿ ತೆಗೆಯಿರಿ.
- ಚಟ್ನಿಯೊಂದಿಗೆ ದಿಢೀರ್ ದೋಸೆ ಸವಿದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ