Sutta badanekayi gojju recipe in Kannada |ಸುಟ್ಟ ಬದನೇಕಾಯಿ ಗೊಜ್ಜು ಮಾಡುವ ವಿಧಾನ
ಸುಟ್ಟ ಬದನೇಕಾಯಿ ಗೊಜ್ಜು ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 ದೊಡ್ಡ ನೇರಳೆ ಬದನೇಕಾಯಿ ಅಥವಾ ಎರಡು ಸಣ್ಣ ಬದನೇಕಾಯಿ
- 1 ಚಮಚ ಬೆಲ್ಲ
- ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
- ಒಂದು ಈರುಳ್ಳಿ
- 2 ಟೇಬಲ್ ಸ್ಪೂನ್ ಕತ್ತರಿಸಿದ ಕೊತ್ತಂಬರಿ ಸೊಪ್ಪು
- 1 - 2 ಟೀಸ್ಪೂನ್ ಕತ್ತರಿಸಿದ ಹಸಿರು ಮೆಣಸಿನಕಾಯಿ
- ಉಪ್ಪು ರುಚಿಗೆ ತಕ್ಕಷ್ಟು
- 1 ಕಪ್ ಮೊಸರು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಟೀಸ್ಪೂನ್ ಅಡುಗೆ ಎಣ್ಣೆ
- 1 ಒಣ ಮೆಣಸಿನಕಾಯಿ ಅಥವಾ ಮಜ್ಜಿಗೆ ಮೆಣಸು
- ಸ್ವಲ್ಪ ಕರಿಬೇವು
- 1/4 ಟೀಸ್ಪೂನ್ ಸಾಸಿವೆ
ಸುಟ್ಟ ಬದನೇಕಾಯಿ ಗೊಜ್ಜು ಮಾಡುವ ವಿಧಾನ:
- ಬದನೇಕಾಯಿ ತೊಳೆದು, ನೀರಾರಿಸಿ, ನೇರವಾಗಿ ಸ್ಟವ್ ನಲ್ಲಿ ಮೆತ್ತಗಾಗುವವರೆಗೆ ಸುಡಿ. ಬದನೇಕಾಯಿಯನ್ನು ತಿರುಗಿಸಿ ತಿರುಗಿಸಿ ಸುಡಬೇಕು. ಸುಮಾರು 7 - 8 ನಿಮಿಷ ಬೇಕಾಗುತ್ತದೆ.
- ತಣ್ಣಗಾದ ಮೇಲೆ ಸಿಪ್ಪೆ ತೆಗೆದು ಫೋರ್ಕ್ ಅಥವಾ ಕೈಯಿಂದ ಕಿವುಚಿ.
- ಉಪ್ಪು, ಬೆಲ್ಲ ಮತ್ತು ಹುಣಿಸೆಹಣ್ಣಿನ ರಸ ಸೇರಿಸಿ, ಕಲಸಿ.
- ನಂತರ ಕತ್ತರಿಸಿದ ಈರುಳ್ಳಿ, ಹಸಿರು ಮೆಣಸಿನಕಾಯಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಕಲಸಿ.
- ಎಣ್ಣೆ, ಒಣಮೆಣಸು,ಕರಿಬೇವು ಮತ್ತು ಸಾಸಿವೆಯ ಒಗ್ಗರಣೆ ಕೊಡಿ. ಅನ್ನ, ರೊಟ್ಟಿ ಅಥವಾ ಚಪಾತಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ