Mosaru dose recipe in Kannada | ಮೊಸರು ದೋಸೆ ಮಾಡುವ ವಿಧಾನ
ಸೋರೆಕಾಯಿ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ದೋಸೆ ಅಕ್ಕಿ
- 1 ಕಪ್ ಮಜ್ಜಿಗೆ ಅಥವಾ ಮೊಸರು
- 1 ಟೀಸ್ಪೂನ್ ಮೆಂತ್ಯ
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- 1/2 ಚಮಚ ಜೀರಿಗೆ
- ಸ್ವಲ್ಪ ಕರಿಬೇವು ಸಣ್ಣಗೆ ಹೆಚ್ಚಿದ್ದು
- ಉಪ್ಪು ರುಚಿಗೆ ತಕ್ಕಷ್ಟು
- 1/2 ಟೀಸ್ಪೂನ್ ಸಕ್ಕರೆ
ಮೊಸರು ದೋಸೆ ಮಾಡುವ ವಿಧಾನ:
- ಅಕ್ಕಿ ಮತ್ತು ಮೆಂತೆಯನ್ನು ತೊಳೆಯಿರಿ.
- ಒಂದು ಕಪ್ ಮೊಸರಿನಲ್ಲಿ 7 - 8 ಗಂಟೆಗಳ ಕಾಲ ನೆನೆಯಲು ಬಿಡಿ.
- ನೆನೆಸಿದ ನಂತರ ಮಿಕ್ಸಿ ಜಾರಿಗೆ ಹಾಕಿ.
- ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ. ಹಿಟ್ಟು ತುಂಬ ಬಿಸಿಯಾಗದಂತೆ ನೋಡಿಕೊಳ್ಳಿ.
- ಅರೆದ ಹಿಟ್ಟನ್ನು ಒಂದು ಪಾತ್ರೆಗೆ ಹಾಕಿ. ಹೆಚ್ಚು ನೀರು ಸೇರಿಸಬೇಡಿ.
- ಮುಚ್ಚಳ ಮುಚ್ಚಿ 7 - 8 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು, ಅರ್ಧ ಚಮಚ ಸಕ್ಕರೆ ಸೇರಿಸಿ ಚೆನ್ನಾಗಿ ಕಲಸಿ.
- ಅಗತ್ಯವಿದ್ದಲ್ಲಿ ಸ್ವಲ್ಪ ನೀರು ಸೇರಿಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ಹರಡಿ, ತೆಳ್ಳಗೆ ದೋಸೆ ಮಾಡಿ.
- ಮುಚ್ಚಳವನ್ನು ಮುಚ್ಚಿ ಬೇಯಿಸಿ.
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ದೋಸೆ ಒಂದು ಬದಿ ಕಾಯಿಸಿದರೆ ಸಾಕು. ತೆಂಗಿನಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ.
- ಮೃದುವಾದ ದೋಸೆ ಬೇಕಾದಲ್ಲಿ, ದೋಸೆ ಹಿಟ್ಟಿಗೆ ಅರ್ಧ ಚಮಚ ಜೀರಿಗೆ ಮತ್ತು ಸ್ವಲ್ಪ ಕರಿಬೇವು ಸೊಪ್ಪು ಸೇರಿಸಿ.
- ಸ್ವಲ್ಪ ನೀರು ಸೇರಿಸಿ, ಹಿಟ್ಟು ತೆಳ್ಳಗೆ ಮಾಡಿಕೊಳ್ಳಿ. ಮತ್ತೆ ದೋಸೆ ಮಾಡಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ