ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 ಮಧ್ಯಮ ಗಾತ್ರದ ಆಲೂಗಡ್ಡೆ
- 1 ಚಮಚ ಹುಣಿಸೆರಸ
- 1/2 ಚಮಚ ಬೆಲ್ಲ
- 1- 2 ಹಸಿರು ಮೆಣಸಿನಕಾಯಿ
- ದೊಡ್ಡ ಚಿಟಿಕೆ ಇಂಗು
- ದೊಡ್ಡ ಚಿಟಿಕೆ ಅರಿಶಿನ
- 1 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1/2 ಟೀಸ್ಪೂನ್ ಸಾಸಿವೆ
- 1 ಒಣಮೆಣಸಿನಕಾಯಿ
- ದೊಡ್ಡ ಚಿಟಿಕೆ ಇಂಗು
- 4-5 ಕರಿಬೇವಿನ ಎಲೆ
- 2 ಟೀಸ್ಪೂನ್ ಅಡುಗೆ ಎಣ್ಣೆ / ತುಪ್ಪ
ಆಲೂಗಡ್ಡೆ ಸಾರು ಮಾಡುವ ವಿಧಾನ:
- ಆಲೂಗಡ್ಡೆಯನ್ನು ಸಿಪ್ಪೆ ತೆಗೆದು, ತೊಳೆದು ಕತ್ತರಿಸಿ.
- ಕತ್ತರಿಸಿದ ಆಲೂಗಡ್ದೆಯನ್ನು ಸುಮಾರು ಒಂದು ಲೋಟದಷ್ಟು ನೀರು ಸೇರಿಸಿ, ಮೆತ್ತಗೆ ಬೇಯಿಸಿಕೊಳ್ಳಿ.
- ಬೇಯಿಸಿದ ಆಲೂಗಡ್ಡೆಯನ್ನು ಚೆನ್ನಾಗಿ ಮಸಿದು ಕೊಳ್ಳಿ (ಮ್ಯಾಶ್ ಮಾಡಿಕೊಳ್ಳಿ)
- ಆಮೇಲೆ ಅದಕ್ಕೆ ಹಸಿರು ಮೆಣಸಿನಕಾಯಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ.
- ಉಪ್ಪು, ಹುಣಿಸೆರಸ ಮತ್ತು ಬೆಲ್ಲವನ್ನು ನಿಮ್ಮ ರುಚಿಗೆ ತಕ್ಕಂತೆ ಸೇರಿಸಿ.
- ಇಂಗು ಮತ್ತು ಅರಿಶಿನ ಪುಡಿಯನ್ನು ಸೇರಿಸಿ ಮಗುಚಿ, ಕುದಿಯಲು ಇಡಿ.
- ಒಂದು ಬಾಣಲೆಯನ್ನು ಬಿಸಿಮಾಡಿ, ಎಣ್ಣೆ, ಸಾಸಿವೆ, ಕರಿಬೇವು, ಇಂಗು ಮತ್ತು ಒಣಮೆಣಸಿನಕಾಯಿ ಸೇರಿಸಿ ಒಗ್ಗರಣೆ ಮಾಡಿ.
- ಕುದಿಸಿದ ಸಾರಿಗೆ ಒಗ್ಗರಣೆ ಹಾಕಿ, ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ