ಸಿಹಿಗುಂಬಳ ದೋಸೆ |
Cheenikai dose recipe in Kannada | ಸಿಹಿಕುಂಬಳಕಾಯಿ ದೋಸೆ ಮಾಡುವ ವಿಧಾನ
ಸಿಹಿಕುಂಬಳಕಾಯಿ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ದೋಸೆ ಅಕ್ಕಿ
- 1 ಕಪ್ ಸಿಪ್ಪೆ ತೆಗೆದು ಕತ್ತರಿಸಿದ ಸಿಹಿಗುಂಬಳಕಾಯಿ
- 1/2 ಕಪ್ ತೆಂಗಿನತುರಿ
- ಸಣ್ಣ ಚೂರು ಶುಂಠಿ
- ಸ್ವಲ್ಪ ಕರಿಬೇವು
- 2 - 3 ಒಣಮೆಣಸಿನಕಾಯಿ
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ಸಿಹಿಕುಂಬಳಕಾಯಿ ದೋಸೆ ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು 2 - 3 ಗಂಟೆಗಳ ಕಾಲ ನೆನೆಯಲು ಬಿಡಿ.
- ನೆನೆಸಿದ ನಂತರ ಅಕ್ಕಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ.
- ನಂತ್ರ ಚೀನಿಕಾಯಿ (ಸಿಹಿಗುಂಬಳ) ಯನ್ನು ಮಿಕ್ಸಿ ಜಾರಿಗೆ ಹಾಕಿ.
- ತೆಂಗಿನತುರಿ, ಶುಂಠಿ, ಕರಿಬೇವು ಮತ್ತು ಒಣಮೆಣಸು ಸೇರಿಸಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ, ಅರೆದು, ಅದೇ ಪಾತ್ರೆಗೆ ಹಾಕಿ.
- ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ತೆಳುವಾಗಿ ಹರಡಿ,
- ಮುಚ್ಚಳವನ್ನು ಮುಚ್ಚಿ ಬೇಯಿಸಿ.
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ.
- ಸಣ್ಣ ಉರಿಯಲ್ಲಿ ಗರಿಗರಿ ಆಗುವವರೆಗೆ ಕಾಯಿಸಿ. ತೆಂಗಿನಕಾಯಿ ಚಟ್ನಿಯೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ