Balekai palya recipe in Kannada | ಬಾಳೆಕಾಯಿ ಪಲ್ಯ ಮಾಡುವ ವಿಧಾನ
ಬಾಳೆಕಾಯಿ ಪಲ್ಯ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 4 ಮಧ್ಯಮ ಗಾತ್ರದ ಬಾಳೆಕಾಯಿ
- ದೊಡ್ಡ ಚಿಟಿಕೆ ಅರಶಿನ ಪುಡಿ
- ಚಿಟಿಕೆ ಇಂಗು
- ಉಪ್ಪು ರುಚಿಗೆ ತಕ್ಕಷ್ಟು
- ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
ಅರೆಯಲು ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 1/4 ಟೀಸ್ಪೂನ್ ಸಾಸಿವೆ
- 1/2 ಕಪ್ ತೆಂಗಿನ ತುರಿ
- ಸ್ವಲ್ಪ ಕೊತ್ತಂಬರಿ ಸೊಪ್ಪು
- 2 - 3 ಹಸಿಮೆಣಸಿನಕಾಯಿ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಚಮಚ ಸಾಸಿವೆ
- 1 ಕೆಂಪು ಮೆಣಸಿನಕಾಯಿ
- 1 ಚಮಚ ಕಡ್ಲೆಬೇಳೆ
- 1 ಚಮಚ ಉದ್ದಿನಬೇಳೆ
- 5 - 6 ಕರಿಬೇವಿನ ಎಲೆ
- 2 ಟೇಬಲ್ ಚಮಚ ಅಡುಗೆ ಎಣ್ಣೆ
ಬಾಳೆಕಾಯಿ ಪಲ್ಯ ಮಾಡುವ ವಿಧಾನ:
- ಬಾಳೆಕಾಯಿಯ ಸಿಪ್ಪೆ ತೆಗೆದು ತೊಳೆದು ಕತ್ತರಿಸಿ.
- ಎಣ್ಣೆ, ಸಾಸಿವೆ, ಒಣ ಮೆಣಸಿನಕಾಯಿ, ಕಡ್ಲೆಬೇಳೆ, ಉದ್ದಿನಬೇಳೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಅದಕ್ಕೆ ಕತ್ತರಿಸಿದ ಬಾಳೆಕಾಯಿ ಹಾಕಿ.
- ಅರಿಶಿನ ಮತ್ತು ಇಂಗು ಸೇರಿಸಿ ಮಗುಚಿ.
- ಉಪ್ಪು ಮತ್ತು ಹುಣಿಸೇಹಣ್ಣು ಹಾಕಿ. ಅರ್ಧ ಕಪ್ ನೀರು ಸೇರಿಸಿ ಮಗುಚಿ.
- ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ ಮೆತ್ತಗಾಗುವವರೆಗೆ ಬೇಯಿಸಿ.
- ಆ ಸಮಯದಲ್ಲಿ, ಮಿಕ್ಸಿಯಲ್ಲಿ ಕೊತ್ತಂಬರಿ ಬೀಜ, ಜೀರಿಗೆ, ಸಾಸಿವೆ, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು ಮತ್ತು ಹಸಿಮೆಣಸಿನಕಾಯಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಬೇಯಿಸಿದ ಬದನೇಕಾಯಿಗೆ ಅರೆದ ಮಸಾಲೆ ಹಾಕಿ.
- ಚೆನ್ನಾಗಿ ಮಗುಚಿ ಎರಡು ನಿಮಿಷ ಬೇಯಿಸಿ.
- ಬಿಸಿ ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ