Tomato chitranna recipe in Kannada | ಟೊಮೆಟೊ ಚಿತ್ರಾನ್ನ ಮಾಡುವ ವಿಧಾನ
ಟೊಮೆಟೊ ಚಿತ್ರಾನ್ನ ವಿಡಿಯೋ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)
- 3/4 ಕಪ್ ಅಕ್ಕಿ (ಸೋನಾ ಮಸೂರಿ)
- 3- 4 ಟೇಬಲ್ ಸ್ಪೂನ್ ಶೇಂಗಾ / ಕಡಲೆಕಾಯಿ
- 1 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 7 - 8 ಕರಿಬೇವಿನ ಎಲೆ
- 1 ದೊಡ್ಡ ಈರುಳ್ಳಿ
- 2 ದೊಡ್ಡ ಟೊಮೇಟೊ
- 1/4 ಟೀಸ್ಪೂನ್ ಅರಿಶಿನ ಪುಡಿ
- ದೊಡ್ಡ ಚಿಟಿಕೆ ಇಂಗು
- 1 - 2 ಟೇಬಲ್ ಸ್ಪೂನ್ ಸಾಂಬಾರ್ ಪೌಡರ್
- 2 ಟೇಬಲ್ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1 ದೊಡ್ಡ ಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 3 - 4 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
ಟೊಮೆಟೊ ಚಿತ್ರಾನ್ನ ಮಾಡುವ ವಿಧಾನ:
- ಅಕ್ಕಿ ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ಅನ್ನ ಸ್ವಲ್ಪ ಉದುರುದುರಾಗಿರಲಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿಮಾಡಿ. ಮೊದಲಿಗೆ ಶೇಂಗಾ ಅಥವಾ ಕಡಲೆಕಾಯಿಯನ್ನು ಹಾಕಿ.
- ಕಡಲೆಕಾಯಿ ಸ್ವಲ್ಪ ಕಾದು ಸಿಡಿಯಲು ಪ್ರಾರಂಭಿಸಿದ ಕೂಡಲೇ ಸಾಸಿವೆ, ಜೀರಿಗೆ, ಕಡ್ಲೆಬೇಳೆ ಮತ್ತು ಉದ್ದಿನ ಬೇಳೆಯನ್ನು ಸೇರಿಸಿ.
- ಸಾಸಿವೆ ಸಿಡಿದ ಕೂಡಲೇ ಹೆಚ್ಚಿದ ಈರುಳ್ಳಿ ಮತ್ತು ಕರಿಬೇವು ಸೇರಿಸಿ ಹುರಿಯಿರಿ.
- ಇಂಗು ಮತ್ತು ಅರಿಶಿನ ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ನಂತರ ಕತ್ತರಿಸಿದ ಟೊಮೇಟೊ ಸೇರಿಸಿ ಹುರಿಯಿರಿ.
- ರುಚಿಗೆ ತಕ್ಕಂತೆ ಉಪ್ಪು ಸೇರಿಸಿ.
- ಅಗತ್ಯವಿದ್ದಲ್ಲಿ ನೀರು ಸೇರಿಸಿ, ಮುಚ್ಚಳ ಮುಚ್ಚಿ, ಟೊಮೇಟೊ ಮೆತ್ತಗಾಗುವವರೆಗೆ ಬೇಯಿಸಿ.
- ಸಾಂಬಾರ್ ಪೌಡರ್ ಸೇರಿಸಿ ಮಗುಚಿ. ರಸಂ ಪೌಡರ್ ಸಹ ಹಾಕಬಹುದು. ಒಮ್ಮೆ ಮಗುಚಿ.
- ಬೇಯಿಸಿದ ಅನ್ನ ಸೇರಿಸಿ.
- ಕೊತ್ತಂಬರಿ ಸೊಪ್ಪು ಸೇರಿಸಿ.
- ಒಂದು ಚಪ್ಪಟೆಯಾದ ಸಟ್ಟುಗದಿಂದ ಕಲಸಿ.
- ಸ್ಟವ್ ಆಫ್ ಮಾಡಿ. ಬಿಸಿ-ಬಿಸಿ ಯಾಗಿರುವಾಗಲೇ ಬಡಿಸಿ.
To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ