Sabbakki dose recipe in Kannada | ಸಬ್ಬಕ್ಕಿ ದೋಸೆ ಮಾಡುವ ವಿಧಾನ
ಸಬ್ಬಕ್ಕಿ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1/2 ಕಪ್ ದೋಸೆ ಅಕ್ಕಿ
- 1/2 ಕಪ್ ಸಬ್ಬಕ್ಕಿ
- 1 ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- 1 ಟೇಬಲ್ ಚಮಚ ಕರಿಬೇವು
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 1 ಹಸಿಮೆಣಸಿನಕಾಯಿ
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ಸಬ್ಬಕ್ಕಿ ದೋಸೆ ಮಾಡುವ ವಿಧಾನ:
- ಅಕ್ಕಿ ಮತ್ತು ಸಬ್ಬಕ್ಕಿಯನ್ನು ತೊಳೆದು 3 ಗಂಟೆಗಳ ಕಾಲ ನೆನೆಯಲು ಬಿಡಿ.
- ನೆನೆಸಿದ ನಂತರ ನೀರು ಬಸಿದು ಮಿಕ್ಸಿ ಜಾರಿಗೆ ಹಾಕಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ.
- ಹಿಟ್ಟನ್ನು ಚೆನ್ನಾಗಿ ಕಲಸಿ.
- ಮುಚ್ಚಳವನ್ನು ಮುಚ್ಚಿ, 8-9 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- ನಂತರ ಹಿಟ್ಟಿಗೆ ಸಣ್ಣಕ್ಕಿ ಹೆಚ್ಚಿದ ಈರುಳ್ಳಿ, ಕರಿಬೇವು, ಕೊತ್ತಂಬರಿ ಸೊಪ್ಪು ಮತ್ತು ಹಸಿಮೆಣಸಿನಕಾಯಿ ಸೇರಿಸಿ.
- ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ಹರಡಿ, ಮುಚ್ಚಳವನ್ನು ಮುಚ್ಚಿ .
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ಇನ್ನೊಂದು ಬದಿ ಕಾಯಿಸಿ. ಖಾರ ತೆಂಗಿನಕಾಯಿ ಚಟ್ನಿ ಯೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ