Veg paratha recipe in Kannada | ವೆಜ್ ಪರೋಟ ಮಾಡುವ ವಿಧಾನ
ವೆಜ್ ಪರೋಟ ವಿಡಿಯೋ
ಹಿಟ್ಟಿಗೆ ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಗೋಧಿ ಹಿಟ್ಟು
- 1/4 ಕಪ್ ಸಣ್ಣಗೆ ಹೆಚ್ಚಿದ ಈರುಳ್ಳಿ
- 1/4 ಕಪ್ ತುರಿದ ಕ್ಯಾರಟ್
- 1/4 ಕಪ್ ಸಣ್ಣಗೆ ಹೆಚ್ಚಿದ ದೊಣ್ಣೆಮೆಣಸು
- 1/4 ಕಪ್ ಸಣ್ಣಗೆ ಹೆಚ್ಚಿದ ಎಲೆ ಕೋಸು
- 1 ಹಸಿಮೆಣಸಿನಕಾಯಿ
- 1 ಟೀಸ್ಪೂನ್ ಶುಂಠಿ ಪೇಸ್ಟ್
- 1 ಟೇಬಲ್ ಚಮಚ ಕರಿಬೇವು
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 1 ಟೀಸ್ಪೂನ್ ಧನಿಯಾ ಪುಡಿ
- 1/2 ಟೀಸ್ಪೂನ್ ಗರಂ ಮಸಾಲಾ
- 1/2 ಟೀಸ್ಪೂನ್ ಅಚ್ಚಖಾರದ ಪುಡಿ
- 1/2 ಟೀಸ್ಪೂನ್ ಜೀರಿಗೆ ಪುಡಿ
- 6 - 8 ಚಮಚ ತುಪ್ಪ ಅಥವಾ ಎಣ್ಣೆ
- 1 ಟೀಸ್ಪೂನ್ ಉಪ್ಪು ಅಥವಾ ರುಚಿಗೆ ತಕ್ಕಷ್ಟು
ವೆಜ್ ಪರೋಟ ಮಾಡುವ ವಿಧಾನ:
- ಒಂದು ಬಟ್ಟಲಿನಲ್ಲಿ ಸಣ್ಣಗೆ ಹೆಚ್ಚಿದ ಈರುಳ್ಳಿ, ತುರಿದ ಕ್ಯಾರಟ್, ಸಣ್ಣಗೆ ಹೆಚ್ಚಿದ ದೊಣ್ಣೆಮೆಣಸು ಮತ್ತು ಸಣ್ಣಗೆ ಹೆಚ್ಚಿದ ಎಲೆ ಕೋಸು ತೆಗೆದುಕೊಳ್ಳಿ.
- ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು ಮತ್ತು ಶುಂಠಿ ಪೇಸ್ಟ್ ಸೇರಿಸಿ.
- ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಅದಕ್ಕೆ ಧನಿಯಾ ಪುಡಿ, ಜೀರಿಗೆ ಪುಡಿ, ಅಚ್ಚಖಾರದ ಪುಡಿ ಮತ್ತು ಗರಂ ಮಸಾಲಾ ಪುಡಿ ಹಾಕಿ.
- ಒಂದು ಕಪ್ ಗೋಧಿಹಿಟ್ಟು ಸೇರಿಸಿ, ಚೆನ್ನಾಗಿ ಕಲಸಿ.
- ಸ್ವಲ್ಪ ಸ್ವಲ್ಪ ನೀರು ಸೇರಿಸುತ್ತ ಮೆತ್ತಗಿನ ಚಪಾತಿ ಹಿಟ್ಟಿನ ಹದಕ್ಕೆ ನಾದಿಕೊಳ್ಳಿ.
- ಒಂದು ದೊಡ್ಡ ನಿಂಬೆ ಗಾತ್ರದ ಹಿಟ್ಟನ್ನು ತೆಗೆದುಕೊಂಡು, ಗೋಧಿ ಹಿಟ್ಟು ಮುಟ್ಟಿಸಿಕೊಂಡು ಸಣ್ಣ ವೃತ್ತಾಕಾರವಾಗಿ ಲಟ್ಟಿಸಿ.
- ಬೇಕಾದಲ್ಲಿ ಒಂದು ಪ್ಲೇಟ್ ಅಥವಾ ಬೌಲ್ ತೆಗೆದುಕೊಂಡು ಒಳ್ಳೆಯ ವೃತ್ತಾಕಾರ ಮಾಡಿಕೊಳ್ಳಿ.
- ಒಂದು ಹೆಂಚು ಅಥವಾ ತವಾ ಬಿಸಿ ಮಾಡಿ. ಲಟ್ಟಿಸಿದ ಚಪಾತಿಯನ್ನು ತವಾ ಮೇಲೆ ಹಾಕಿ ಎರಡು ಬದಿ ಖಾಯಿಸಿ. ಖಾಯಿಸುವಾಗ ಎರಡೂ ಬದಿಯೂ ತುಪ್ಪ ಅಥವಾ ಎಣ್ಣೆ ಹಾಕಿ.
- ಕೆಚಪ್ ಅಥವಾ ಮೊಸರು ಅಥವಾ ಯಾವುದೇ ಗೊಜ್ಜಿನೊಂದಿಗೆ ಬಡಿಸಿ. ಹಾಗೆಯೂ ತಿನ್ನಬಹುದು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ