Halasinakai palya recipe in Kannada | ಹಲಸಿನಕಾಯಿ ಪಲ್ಯ ಮಾಡುವ ವಿಧಾನ
ಹಲಸಿನಕಾಯಿ ಪಲ್ಯ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಎಳೆ ಹಲಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆ ಬೇಳೆ
- 4 - 6 ಟೀಸ್ಪೂನ್ ಅಡುಗೆ ಎಣ್ಣೆ
- 1 ದೊಡ್ಡ ಚಿಟಿಕೆ ಅರಿಶಿನ ಪುಡಿ
- 1 ದೊಡ್ಡ ಚಿಟಿಕೆ ಇಂಗು
- 4 - 5 ಕರಿಬೇವಿನ ಎಲೆ
- ನೆಲ್ಲಿಕಾಯಿ ಗಾತ್ರದ ಬೆಲ್ಲ
- ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
- ಉಪ್ಪು ರುಚಿಗೆ ತಕ್ಕಷ್ಟು
ಅರೆಯಲು ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನ ತುರಿ
- 3 ಒಣ ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಕೊತ್ತಂಬರಿ ಬೀಜ
ಹಲಸಿನಕಾಯಿ ಪಲ್ಯ ಮಾಡುವ ವಿಧಾನ:
- ಹಲಸಿನಕಾಯಿ ಹೊರಗಿನ ಸಿಪ್ಪೆ ಮತ್ತು ಒಳಗಿನ ತಿರುಳು ತೆಗೆದು ಕತ್ತರಿಸಿ ನೀರಿನಲ್ಲಿ ಹಾಕಿಡಿ.
- ನಂತ್ರ ಕುಕ್ಕರ್ ನಲ್ಲಿ ನೀರಿನಲ್ಲಿ ಹಾಕಿಟ್ಟ ಹಲಸಿನಕಾಯಿ ತೆಗೆದುಕೊಳ್ಳಿ.
- ಒಂದು ಚಮಚ ಉಪ್ಪು ಮತ್ತು ಚಿಟಿಕೆ ಅರಶಿನ ಪುಡಿ ಹಾಕಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ ಮೆತ್ತಗೆ ಬೇಯಿಸಿಕೊಳ್ಳಿ.
- ಬೇಯಿಸಿದ ನಂತರ ನೀರು ಬಸಿದು, ಹಲಸಿನಕಾಯಿಯನ್ನು ಗುದ್ದಿಕೊಳ್ಳಿ.
- ಒಂದು ಮಿಕ್ಸಿ ಜಾರ್ ನಲ್ಲಿ ತೆಂಗಿನ ತುರಿ, ಸಾಸಿವೆ, ಕೊತ್ತಂಬರಿ ಬೀಜ ಮತ್ತು ಒಣ ಮೆಣಸಿನಕಾಯಿ ಹಾಕಿ, ನೀರು ಹಾಕದೆ ಪುಡಿ ಮಾಡಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ, ಉದ್ದಿನಬೇಳೆ ಮತ್ತು ಕಡ್ಲೆಬೇಳೆ ಹಾಕಿ.
- ಸಾಸಿವೆ ಸಿಡಿದ ಕೂಡಲೇ ಒಣಮೆಣಸಿನಕಾಯಿ, ಅರಶಿನ, ಇಂಗು ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆ ತಯಾರಿಸಿಕೊಳ್ಳಿ.
- ಅದಕ್ಕೆ ಜಜ್ಜಿದ ಹಲಸಿನಕಾಯಿ ಹಾಕಿ. ಒಮ್ಮೆ ಮಗುಚಿ.
- ಉಪ್ಪು, ಹುಳಿ ಮತ್ತು ಬೆಲ್ಲ ಹಾಕಿ ಮಗುಚಿ.
- ಪುಡಿ ಮಾಡಿದ ಮಸಾಲೆಯನ್ನು ಸೇರಿಸಿ ಮಗುಚಿ. ಸ್ಟೋವ್ ಆಫ್ ಮಾಡಿ. ಚಪಾತಿ ಅಥವಾ ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ