Avalakki rotti recipe Kannada | ಅವಲಕ್ಕಿ ರೊಟ್ಟಿ ಮಾಡುವ ವಿಧಾನ
ಅಕ್ಕಿರೊಟ್ಟಿ ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1/2 ಕಪ್ ಅಕ್ಕಿಹಿಟ್ಟು
- 1/2 ಕಪ್ ತೆಳು ಅವಲಕ್ಕಿ
- 2 - 3 ಟೇಬಲ್ ಚಮಚ ಬಿಸಿ ನೀರು (ಬೇಕಾದಲ್ಲಿ)
- 1/2 ಟೀಸ್ಪೂನ್ ಜೀರಿಗೆ
- 2 ಟೇಬಲ್ ಸ್ಪೂನ್ ತೆಂಗಿನತುರಿ
- 1 - 2 ಸಣ್ಣಗೆ ಹೆಚ್ಚಿದ ಹಸಿರುಮೆಣಸಿನ ಕಾಯಿ
- 1 ಸಣ್ಣಗೆ ಹೆಚ್ಚಿದ ಈರುಳ್ಳಿ
- 1 ಟೇಬಲ್ ಸ್ಪೂನ್ ಹೆಚ್ಚಿದ ಕರಿಬೇವಿನ ಎಲೆ
- 2 ಟೇಬಲ್ ಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು
- ರೊಟ್ಟಿ ಮಾಡಲು ಎಣ್ಣೆ
- 15x15cm ಗಾತ್ರದ ದಪ್ಪ ಪ್ಲಾಸ್ಟಿಕ್ ಹಾಳೆ / ಬಾಳೆ ಎಲೆ
ಅವಲಕ್ಕಿ ರೊಟ್ಟಿ ಮಾಡುವ ವಿಧಾನ:
- ಅವಲಕ್ಕಿಯನ್ನು ತೊಳೆದು, ನೀರು ಬಸಿದು, ಚೆನ್ನಾಗಿ ಹಿಸುಕಿ.
- ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟು ಮತ್ತು ಹಿಸುಕಿದ ಅವಲಕ್ಕಿ ತೆಗೆದುಕೊಳ್ಳಿ.
- ಅದಕ್ಕೆ ಕತ್ತರಿಸಿದ ಈರುಳ್ಳಿ , ತೆಂಗಿನತುರಿ ಮತ್ತು ಜೀರಿಗೆ ಸೇರಿಸಿ.
- ನಂತ್ರ ಕತ್ತರಿಸಿದ ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು ಮತ್ತು ಹಸಿಮೆಣಸಿನಕಾಯಿ ಸೇರಿಸಿ.
- ಋಷಿಗೆ ತಕ್ಕಂತೆ ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಬೇಕಾದಲ್ಲಿ ಸ್ವಲ್ಪ ಬಿಸಿ ನೀರು ಸೇರಿಸಿ ಮೃದುವಾದ ಹಿಟ್ಟನ್ನು ತಯಾರಿಸಿಕೊಳ್ಳಿ.
- ಒಂದು ಸಣ್ಣ ಬಟ್ಟಲಿನಲ್ಲಿ ಎಣ್ಣೆಯನ್ನು ತೆಗೆದು ಕೊಳ್ಳಿ. ಪ್ಲಾಸ್ಟಿಕ್ ಹಾಳೆ ಅಥವಾ ಬಾಳೆ ಎಲೆಯ ಮೇಲೆ ಎಣ್ಣೆಯನ್ನು ಹಚ್ಚಿ ಒಂದು ದೊಡ್ಡ ನಿಂಬೆ ಗಾತ್ರದ ಹಿಟ್ಟು ಇರಿಸಿ.
- ಈಗ ನಿಮ್ಮ ಬೆರಳುಗಳಿಗೆ ಎಣ್ಣೆ ಹಚ್ಚಿಕೊಂಡು, ತಟ್ಟುತ್ತಾ ವೃತ್ತಾಕಾರದ ಅಕ್ಕಿ ರೊಟ್ಟಿಯನ್ನುಮಾಡಿ. ಆಗಾಗ್ಯೆ ಕೈ ಬೆರಳುಗಳಿಂದ ಎಣ್ಣೆ ಮುಟ್ಟುತ್ತಾ ರೊಟ್ಟಿ ತಟ್ಟುವುದರಿಂದ ಕೈಗೆ ಅಂಟುವುದಿಲ್ಲ.
- ಅಕ್ಕಿ ರೊಟ್ಟಿಯನ್ನು ಕೈಯಲ್ಲಿ ತೆಗೆದುಕೊಂಡು ಬಿಸಿ ತವಾ ಮೇಲೆ ಹಾಕಿ.
- ಮೇಲಿನಿಂದ ಎಣ್ಣೆ ಹಾಕಿ ಕಾಯಿಸಿ. ರೊಟ್ಟಿಯನ್ನು ತಿರುವಿ ಹಾಕಿ ಇನ್ನೊಂದು ಬದಿಯೂ ಕಾಯಿಸಿ.
- ಚಟ್ನಿ ಅಥವಾ ಯಾವುದೇ ಗೊಜ್ಜಿನೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ