Kanchipuram idli recipe in Kannada | ಮಸಾಲೆ ಇಡ್ಲಿ ಮಾಡುವ ವಿಧಾನ
ಮಸಾಲೆ ಇಡ್ಲಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಇಡ್ಲಿ ರವೆ
- 1/2 ಕಪ್ ಉದ್ದಿನಬೇಳೆ
- 1 ಟೀಸ್ಪೂನ್ ಮೆಂತೆ
- ಎಣ್ಣೆ ಅಥವಾ ತುಪ್ಪ (ಇಡ್ಲಿ ತಟ್ಟೆಗೆ ಹಚ್ಚಲು)
- ಉಪ್ಪು ರುಚಿಗೆ ತಕ್ಕಷ್ಟು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಉದ್ದಿನಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 1/2 - 1 ಟೀಸ್ಪೂನ್ ಜಜ್ಜಿದ ಕಾಳುಮೆಣಸು
- 1 ಟೀಸ್ಪೂನ್ ಹೆಚ್ಚಿದ ಕರಿಬೇವಿನ ಸೊಪ್ಪು
- 1 ಟೇಬಲ್ ಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/2 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
- 1 ಹೆಚ್ಚಿದ ಹಸಿರು ಮೆಣಸಿನಕಾಯಿ
- ದೊಡ್ಡ ಚಿಟಿಕೆ ಇಂಗು
- 2 ಟೀಸ್ಪೂನ್ ಅಡುಗೆ ಎಣ್ಣೆ
ಮಸಾಲೆ ಇಡ್ಲಿ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಉದ್ದಿನಬೇಳೆ ಮತ್ತು ಮೆಂತೆ ತೆಗೆದುಕೊಳ್ಳಿ.
- ಚೆನ್ನಾಗಿ ತೊಳೆದು, 4 - 5 ಘಂಟೆ ನೆನೆಸಿಡಿ.
- ನೆನೆಸಿದ ನಂತರ ನೀರು ಬಗ್ಗಿಸಿ, ಮಿಕ್ಸಿ ಜಾರಿನಲ್ಲಿ ತೆಗೆದುಕೊಳ್ಳಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆಯಿರಿ.
- ಇಡ್ಲಿರವೆಯನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ತೊಳೆದು, ನೀರು ಸಂಪೂರ್ಣ ಬಗ್ಗಿಸಿ.
- ಅದಕ್ಕೆ ಅರೆದ ಉದ್ದಿನಹಿಟ್ಟು ಹಾಕಿ.
- ಚೆನ್ನಾಗಿ ಕಲಸಿ.
- ಮುಚ್ಚಳ ಮುಚ್ಚಿ 7 - 10 ಘಂಟೆ ಹಿಟ್ಟು ಹುದುಗಲು ಬಿಡಿ.
- ಹಿಟ್ಟು ಹುದುಗಿದ ಮೇಲೆ ರುಚಿಗೆ ತಕ್ಕಂತೆ ಉಪ್ಪು ಸೇರಿಸಿ ಕಲಸಿ.
- ಒಂದು ಬಾಣಲೆ ಬಿಸಿ ಮಾಡಿ. ಎಣ್ಣೆ, ಸಾಸಿವೆ, ಜೀರಿಗೆ, ಉದ್ದಿನಬೇಳೆ ಮತ್ತು ಕಡ್ಲೆಬೇಳೆಯ ಒಗ್ಗರಣೆ ಮಾಡಿ.
- ಸಾಸಿವೆ ಸಿಡಿದ ಕೂಡಲೇ ಜಜ್ಜಿದ ಕಾಳುಮೆಣಸು, ಹೆಚ್ಚಿದ ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಶುಂಠಿ ಮತ್ತು ಹಸಿರುಮೆಣಸಿನಕಾಯಿ ಸೇರಿಸಿ ಹುರಿಯಿರಿ.
- ನಂತರ ಇಂಗು ಸೇರಿಸಿ ಸ್ಟವ್ ಆಫ್ ಮಾಡಿ.
- ಇಡ್ಲಿ ಮಾಡಲು ತುಪ್ಪ ಅಥವಾ ಎಣ್ಣೆ ಸವರಿದ ಇಡ್ಲಿ ತಟ್ಟೆಗೆ ಹಿಟ್ಟನ್ನು ಹಾಕಿ 10 - 12 ನಿಮಿಷ ಆವಿ ಅಥವಾ ಸೆಕೆಯಲ್ಲಿ ಬೇಯಿಸಿ.
- ನಾನು ಲೋಟದಲ್ಲಿ ಹಾಕಿ 20 ನಿಮಿಷ ಬೇಯಿಸಿದೆ.
- ತೆಂಗಿನ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ