Beans sambar recipe in Kannada | ಬೀನ್ಸ್ ಸಾಂಬಾರ್ ಮಾಡುವ ವಿಧಾನ
ಬೀನ್ಸ್ ಸಾಂಬಾರ್ ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1/4kg ಬೀನ್ಸ್
- 1/4 ಕಪ್ ತೊಗರಿಬೇಳೆ
- ದೊಡ್ಡ ಚಿಟಿಕೆ ಅರಿಶಿನ ಪುಡಿ
- 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 1/2 ಟೀಸ್ಪೂನ್ ಬೆಲ್ಲ (ಬೇಕಾದಲ್ಲಿ)
- ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
- ಸ್ವಲ್ಪ ಕೊತ್ತಂಬರಿ ಸೊಪ್ಪು
ಮಸಾಲೆಗೆ ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನ ತುರಿ
- 2 - 4 ಕೆಂಪು ಮೆಣಸಿನಕಾಯಿ
- 1 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 7 - 8 ಮೆಂತ್ಯ ಕಾಳು
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 5 - 6 ಕರಿಬೇವು
- 1/2 ಟೀಸ್ಪೂನ್ ಸಾಸಿವೆ
- ಒಂದು ಚಿಟಿಕೆ ಇಂಗು
- 1 ಟೀಸ್ಪೂನ್ ಅಡುಗೆ ಎಣ್ಣೆ
ಬೀನ್ಸ್ ಸಾಂಬಾರ್ ಮಾಡುವ ವಿಧಾನ:
- ಬೀನ್ಸ್ ನ್ನು ತೊಳೆದು ಕತ್ತರಿಸಿ.
- ಬೇಳೆಯನ್ನು ಒಂದು ಕುಕ್ಕರ್ ನಲ್ಲಿ ತೆಗೆದುಕೊಂಡು ತೊಳೆಯಿರಿ. 1/2 ಕಪ್ ನೀರು, ಚಿಟಿಕೆ ಅರಶಿನ ಪುಡಿ ಮತ್ತು ಒಂದೆರಡು ಹನಿ ಎಣ್ಣೆ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
- ಈಗ ಅದೇ ಕುಕ್ಕರ್ ಗೆ ಕತ್ತರಿಸಿದಬೀನ್ಸ್, ಸ್ವಲ್ಪ ಉಪ್ಪು ಮತ್ತು 1 ಲೋಟ ನೀರು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
- ನಂತ್ರ ಒಂದು ಬಾಣಲೆ ತೆಗೆದು ಕೊಂಡು, ಒಣ ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ ಮತ್ತು ಮೆಂತೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
- ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ.
- ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ.
- ಉಪ್ಪು, ಬೆಲ್ಲ ಮತ್ತು ಹುಣಿಸೆರಸ ಹಾಕಿ.
- ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
- ಒಣ ಮೆಣಸಿನಕಾಯಿ, ಸಾಸಿವೆ, ಕರಿಬೇವಿನ ಮತ್ತು ಇಂಗಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ