Bele kadubu recipe in Kannada | ಬೇಳೆ ಕಡುಬು ಮಾಡುವ ವಿಧಾನ
ಬೇಳೆ ಕಡುಬು ವಿಡಿಯೋ
ಚಪಾತಿಗೆ ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಕಪ್ ಗೋಧಿಹಿಟ್ಟು
- 1/4 ಕಪ್ ನೀರು
- 1/4 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಂತೆ)
ಮಸಾಲೆಗೆ ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/4 ಕಪ್ ತೊಗರಿಬೇಳೆ
- 2 ಟೇಬಲ್ ಚಮಚ ಎಣ್ಣೆ
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 1 ಹಸಿಮೆಣಸಿನಕಾಯಿ
- 1 ಈರುಳ್ಳಿ
- 1 ಟೊಮೇಟೊ
- ಚಿಟಿಕೆ ಅರಿಶಿನ
- ಚಿಟಿಕೆ ಇಂಗು
- 1/2 - 1 ಟೀಸ್ಪೂನ್ ಅಚ್ಚಖಾರದ ಪುಡಿ
- 1/2 ಟೀಸ್ಪೂನ್ ಗರಂ ಮಸಾಲಾ
- 2 ಟೇಬಲ್ ಚಮಚ ತೆಂಗಿನತುರಿ
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಂತೆ
ಬೇಳೆ ಕಡುಬು ಮಾಡುವ ವಿಧಾನ:
- ತೊಗರಿಬೇಳೆಯನ್ನು, ಅಗತ್ಯವಿದ್ದಷ್ಟು ನೀರು ಸೇರಿಸಿ ಮೆತ್ತಗೆ ಬೇಯಿಸಿಕೊಳ್ಳಿ.
- ಒಂದು ಬಾಣಲೆಯಲ್ಲಿ ಎಣ್ಣೆ, ಸಾಸಿವೆ ಮತ್ತು ಜೀರಿಗೆಯ ಒಗ್ಗರಣೆ ಮಾಡಿ.
- ಅದಕ್ಕೆ ಕತ್ತರಿಸಿದ ಹಸಿಮೆಣಸಿನಕಾಯಿ ಮತ್ತು ಈರುಳ್ಳಿ ಸೇರಿಸಿ ಹುರಿಯಿರಿ.
- ಹುರಿಯುವಾಗ ಅರಿಶಿನ ಮತ್ತು ಇಂಗು ಸೇರಿಸಿ.
- ನಂತರ ಕತ್ತರಿಸದ ಟೊಮೇಟೊ ಹಾಕಿ ಹುರಿಯಿರಿ.
- ಹುರಿಯುವಾಗ ಉಪ್ಪು, ಅಚ್ಚಖಾರದಪುಡಿ ಮತ್ತು ಗರಂ ಮಸಾಲಾ ಹಾಕಿ ಟೊಮೇಟೊ ಮೆತ್ತಗಾಗುವವರೆಗೆ ಹುರಿಯಿರಿ.
- ಬೇಯಿಸಿದ ಬೇಳೆ ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಯಲು ಇಡಿ.
- ಗೋಧಿ ಹಿಟ್ಟನ್ನು ಚಪಾತಿ ಹಿಟ್ಟಿನ ಹದಕ್ಕೆ ಕಲಸಿ.
- ತೆಳ್ಳಗೆ ಚಪಾತಿ ಮಾಡಿ, ಕತ್ತರಿಸಿ.
- ಕುದಿಯುತ್ತಿರುವ ಮಸಾಲೆಗೆ ಹಾಕಿ.
- ತೆಂಗಿನತುರಿ, ಕೊತ್ತಂಬರಿ ಸೊಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ.
- ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ ಹತ್ತು ನಿಮಿಷ ಬೇಯಿಸಿ.
- ಬೇಕಾದಲ್ಲಿ ಉಪ್ಪು, ಹುಳಿ ಮತ್ತು ಸಿಹಿಯನ್ನು ನಿಮ್ಮ ರುಚಿಗೆ ತಕ್ಕಂತೆ ಹೊಂದಿಸಿಕೊಳ್ಳಿ.
- ಕುದಿಸಿ, ಸ್ಟವ್ ಆಫ್ ಮಾಡಿ, ಬಿಸಿ ಬಿಸಿಯಾಗಿ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ