Kayi sasive gojjina chitranna recipe in Kannada | ಕಾಯಿ ಸಾಸಿವೆ ಗೊಜ್ಜಿನ ಚಿತ್ರಾನ್ನ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- ಕಪ್ ಅಕ್ಕಿ (ಸೋನಾಮಸೂರಿ)
- 1 ಕಪ್ ತೆಂಗಿನ ತುರಿ
- 3 - 5 ಕೆಂಪು ಮೆಣಸಿನಕಾಯಿ
- 1/4 ಟೀಸ್ಪೂನ್ ಸಾಸಿವೆ
- 1 ಸಣ್ಣ ನಿಂಬೆ ಗಾತ್ರದ ಬೆಲ್ಲ
- 1 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 2 ಟೇಬಲ್ ಚಮಚ ಕಡಲೇಕಾಯಿ ಅಥವಾ ಶೇಂಗಾ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 4 - 6 ಕರಿಬೇವಿನ ಎಲೆ
- 1/4 ಟೀಸ್ಪೂನ್ ಅರಿಶಿನ ಪುಡಿ
- 4 ಟೇಬಲ್ ಚಮಚ ಅಡುಗೆ ಎಣ್ಣೆ (ತೆಂಗಿನೆಣ್ಣೆಗೆ ಆದ್ಯತೆ)
ಕಾಯಿ ಸಾಸಿವೆ ಚಿತ್ರಾನ್ನ ಮಾಡುವ ವಿಧಾನ:
- ಉದುರುದುರಾಗಿ ಅನ್ನ ಮಾಡಿಟ್ಟುಕೊಳ್ಳಿ.
- ಮಿಕ್ಸಿ ಜಾರಿಗೆ ತೆಂಗಿನಕಾಯಿ, ಕೆಂಪು ಮೆಣಸಿನಕಾಯಿ ಮತ್ತು ಸಾಸಿವೆಯನ್ನು ಹಾಕಿ.
- ಅಗತ್ಯವಿದ್ದಷ್ಟು ನೀರು ಬಳಸಿ ನುಣ್ಣನೆ ಅರೆದು ಪಕ್ಕಕ್ಕಿಡಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿಮಾಡಿ. ಕಡಲೆಕಾಯಿ (ಶೇಂಗಾ) ಯನ್ನು ಹಾಕಿ ಹುರಿಯಿರಿ.
- ಕೆಂಪು ಮೆಣಸಿನಕಾಯಿ, ಸಾಸಿವೆ , ಉದ್ದಿನ ಬೇಳೆ ಮತ್ತು ಕಡಲೆಬೇಳೆ ಬಳಸಿಕೊಂಡು ಒಗ್ಗರಣೆ ಮಾಡಿ.
- ನಂತರ ಅರಿಶಿನ ಪುಡಿ , ಇಂಗು ಮತ್ತು ಕರಿಬೇವು ಸೇರಿಸಿ. ಉರಿ ಕಡಿಮೆ ಮಾಡಿ.
- ಉಪ್ಪು, ಬೆಲ್ಲ ಮತ್ತು ಹುಣಸೆ ರಸ ಸೇರಿಸಿ ಕುದಿಯಲು ಬಿಡಿ.
- ಅರೆದ ಮಸಾಲಾ ಪೇಸ್ಟ್ ಸೇರಿಸಿ.
- ಚೆನ್ನಾಗಿ ಕಲಸಿ ಸಣ್ಣ ಉರಿಯಲ್ಲಿ ಬೆಲ್ಲ ಕರಗುವವರೆಗೆ ಕುದಿಸಿ. ಸ್ಟವ್ ಆಫ್ ಮಾಡಿ.
- ಅನ್ನ ಹಾಕಿ ಕಲಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ