Plain rave rotti recipe in Kannada | ಉಕ್ಕರಿಸಿದ ರವೆ ರೊಟ್ಟಿ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಚಿರೋಟಿ ರವೆ
- 1.25 ಕಪ್ ನೀರು
- 1 ಟೀಸ್ಪೂನ್ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
ಉಕ್ಕರಿಸಿದ ರವೆ ರೊಟ್ಟಿ ಮಾಡುವ ವಿಧಾನ:
- ಒಂದು ಬಾಣಲೆಯಲ್ಲಿ ನೀರು, ಉಪ್ಪು ಮತ್ತು ಎಣ್ಣೆ ಹಾಕಿ ಕುದಿಯಲು ಇಡಿ.
- ನೀರು ಕುದಿಯಲು ಪ್ರಾರಂಭಿಸಿದ ಕೂಡಲೇ ರವೆ ಸೇರಿಸಿ ಒಂದು ನಿಮಿಷ ಚೆನ್ನಾಗಿ ಕಲಸಿ.
- ಸ್ಟವ್ ಆಫ್ ಮಾಡಿ.
- ಬಿಸಿ ಆರಿದ ಮೇಲೆ ಕೈಯಿಂದ ಚೆನ್ನಾಗಿ ನಾದಿ ಮೃದುವಾದ ಹಿಟ್ಟನ್ನು ತಯಾರಿಸಿ.
- ನಿಂಬೆ ಗಾತ್ರದ ಉಂಡೆ ಮಾಡಿಕೊಂಡು, ಅಗತ್ಯವಿದ್ದಷ್ಟು ಹಿಟ್ಟು (ಅಕ್ಕಿ ಹಿಟ್ಟು ಅಥವಾ ಬೇರೆ ಯಾವುದಾದ್ರೂ ಹಿಟ್ಟು) ಹಾಕಿ ತೆಳ್ಳಗೆ ಲಟ್ಟಿಸಿ.
- ಒಂದು ಹೆಂಚು ಅಥವಾ ತವಾ ಬಿಸಿ ಮಾಡಿ.
- ಲಟ್ಟಿಸಿದ ರೊಟ್ಟಿಯನ್ನು ತವಾ ಮೇಲೆ ಹಾಕಿ ಖಾಯಿಸಿ.
- ಸಣ್ಣ ಗುಳ್ಳೆಗಳು ಬಂಡ ಕೂಡಲೇ ತಿರುಗಿಸಿ ಇನ್ನೊಂದು ಬದಿ ಕಾಯಿಸಿ.
- ಎರಡು ಬದಿ ಅಲ್ಲಲ್ಲಿ ಕೆಂಪಗಾಗುವವರೆಗೆ ಕಾಯಿಸಿ.
- ನಿಮ್ಮಿಷ್ಟದ ಗೊಜ್ಜು ಅಥವಾ ಪಲ್ಯದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ