Idli recipe using dosa rice in Kannada | ದೋಸೆ ಅಕ್ಕಿಯಿಂದ ಇಡ್ಲಿ ಮಾಡುವ ವಿಧಾನ
ದೋಸೆ ಅಕ್ಕಿಯಿಂದ ಇಡ್ಲಿ ಮಾಡುವ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ದೋಸೆ ಅಕ್ಕಿ
- 1/2 - 1/3 ಕಪ್ ಉದ್ದಿನ ಬೇಳೆ
- 1/2 ಟೀಸ್ಪೂನ್ ಮೆಂತೆ
- 1/4 - 1/2 ಕಪ್ ಅವಲಕ್ಕಿ
- ಉಪ್ಪು ನಿಮ್ಮ ರುಚಿ ಪ್ರಕಾರ
ದೋಸೆ ಅಕ್ಕಿಯಿಂದ ಇಡ್ಲಿ ಮಾಡುವ ವಿಧಾನ:
- ಉದ್ದಿನಬೇಳೆ - ಮೆಂತೆ, ಅಕ್ಕಿ ಮತ್ತು ಅವಲಕ್ಕಿಯನ್ನು ಬೇರೆ ಬೇರೆ ಪಾತ್ರೆಯಲ್ಲಿ 3 - 4 ಗಂಟೆಗಳ ಕಾಲ ನೆನೆಸಿಡಿ.
- ಮೊದಲಿಗೆ ಉದ್ದಿನಬೇಳೆ ಮತ್ತು ಮೆಂತೆಯನ್ನು ಸ್ವಲ್ಪ ಸ್ವಲ್ಪ ನೀರು ಸೇರಿಸುತ್ತಾ ನಯವಾಗಿ ಅರೆಯಿರಿ ಒಂದು ಪಾತ್ರೆಗೆ ಬಗ್ಗಿಸಿ.
- ಅವಲಕ್ಕಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆದು ಅದೇ ಪಾತ್ರೆಗೆ ಹಾಕಿ.
- ಆಮೇಲೆ ನೆನೆಸಿದ ಅಕ್ಕಿಯ ನೀರು ಬಸಿದು, ಸ್ವಲ್ಪ ತರಿ ತರಿಯಾಗಿ ಅರೆದು, ಅದೇ ಪಾತ್ರೆಗೆ ಬಗ್ಗಿಸಿ. ಅರೆಯಲು ಅಗತ್ಯವಿದ್ದಷ್ಟು ಮಾತ್ರ ನೀರು ಸೇರಿಸಿ. ಗಮನಿಸಿ, ಹೆಚ್ಚು ನೀರು ಸೇರಿಸಬೇಡಿ ಮತ್ತು ಸ್ವಲ್ಪ ತರಿ ತರಿ ಇದ್ದರೆ ಸಾಕು.
- ಕೈಗಳನ್ನು ಬಳಸಿ ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ 8 - 10 ಗಂಟೆಗಳ ಕಾಲ ಹುದುಗಲು ಬಿಡಿ.
- ಹುದುಗುವಿಕೆಯ ನಂತರ ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಇಡ್ಲಿ ತಟ್ಟೆಗಳಿಗೆ ಎಣ್ಣೆ ಅಥವಾ ತುಪ್ಪ ಸವರಿ ಇಡ್ಲಿ ಹಿಟ್ಟನ್ನು ಹಾಕಿ.
- 10 ನಿಮಿಷಗಳ ಕಾಲ ಅದನ್ನು ಸೆಕೆಯಲ್ಲಿ ಬೇಯಿಸಿ. ಇಡ್ಲಿ ಪಾತ್ರೆಯಲ್ಲಿ ನೀರು ಕುದಿಯಲು ಪ್ರಾರಂಭವಾದ ಮೇಲೆ ಇಡ್ಲಿ ತಟ್ಟೆಗಳನ್ನಿಡಿ. ೧೦ - ೧೨ ನಿಮಿಷಗಳ ಕಾಲ ಬೇಯಿಸಿ.
- ಒಂದೈದು ನಿಮಿಷ ಬಿಟ್ಟು ಇಡ್ಲಿಯನ್ನು ತೆಗೆದು ಸಾಂಬಾರ್ ಮತ್ತು ಚಟ್ನಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ